ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಅ.2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ

Last Updated 22 ಸೆಪ್ಟೆಂಬರ್ 2018, 15:35 IST
ಅಕ್ಷರ ಗಾತ್ರ

ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯಿಸಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾ ಸಂಚಾಲಕ ಅಂಬಣ್ಣ ಅರೋಲಿಕರ್ ತಿಳಿಸಿದರು.

ಈ ಸಂಬಂಧ ರಾಜ್ಯ ಸರ್ಕಾರ ಶಿಫಾರಸು ಮಾಡದಿದ್ದರೆ, ಅ. 2ರ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದರು.

ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಒಪ್ಪಿಸಿ ಅನೇಕ ವರ್ಷಗಳಾಗಿದ್ದರೂ ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಮಾದಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ, ಶೈಕ್ಷಣಿಕ ಸೌಲಭ್ಯ ನೀಡುವಂತೆ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ, ಈವರೆಗೂ ಅಧಿಕಾರ ನಡೆಸಿದ ಎಲ್ಲಾ ಸರ್ಕಾರಗಳು ಮಾದಿಗ ಸಮುದಾಯದವರನ್ನು ನಿರ್ಲಕ್ಷಿಸುತ್ತಲೇ ಬಂದಿವೆ ಎಂದು ದೂರಿದರು.

ಅ. 12 ರಂದು ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂದೆ, 17 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗೃಹ ಕಚೇರಿ ಕೃಷ್ಣ ಎದುರು ಧರಣಿ ನಡೆಸಲಿದ್ದೇವೆ. 22 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಿದ್ದೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ 23 ರಿಂದ ನಿರಂತರ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಸಮುದಾಯದ ಮುಖಂಡರಾದ ಮಾಡನಾಯಕನಹಳ್ಳಿ ರಂಗಪ್ಪ, ಹುಲ್ಲೂರು ಕುಮಾರ್, ಪೆನ್ನಪ್ಪ, ಮುತ್ತಣ್ ವೈ.ಬೆನ್ನೂರ, ಬೀಸ್ನಳ್ಳಿ ಜಯಣ್ಣ, ಚಂದ್ರಪ್ಪ, ಶರಣಪ್ಪ, ಲಿಂಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT