ಮಂಗಳವಾರ, ಅಕ್ಟೋಬರ್ 4, 2022
27 °C

ಮುರುಘಾ ಮಠಕ್ಕೆ ಮಹಾಂತರುದ್ರ ಸ್ವಾಮೀಜಿ ಪ್ರಭಾರ ಪೀಠಾಧಿಪತಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲ್ಲೂಕಿನ ಹೆಬ್ಬಾಳು ವಿರಕ್ತ ಮಠದ ಮಹಾಂತರುದ್ರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.

ಬಂಧನಕ್ಕೂ ಮೊದಲು ಮಠದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಠ ಅಧಿಕೃತ ಮಾಹಿತಿ ಹೊರಹಾಕಿಲ್ಲ.

ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಮಹಾಂತರುದ್ರ ಸ್ವಾಮೀಜಿ ಅವರು ಶರಣರ ಜೊತೆಗೆ ಇದ್ದರು. ಭಕ್ತರು, ಮಠಾಧೀಶರೊಂದಿಗೆ ಸರಣಿ ಸಭೆ ನಡೆಸಿದ ಶರಣರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದರು. ಮಠದ ಆಡಳಿತಾಧಿಕಾರಿ ಬಸವರಾಜನ್ ಹೆಸರು ಉಲ್ಲೇಖಿಸದೇ ಮಾಧ್ಯಮಗಳ ಎದುರು ಆಕ್ರೋಶ ಹೊರಹಾಕಿದ್ದರು.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು