ಚಿತ್ರದುರ್ಗ: ದಲಿತ ಪರ ಸಂಘಟನೆಗಳ ವತಿಯಿಂದ ಮಹಿಷ ಉತ್ಸವವನ್ನು ಬುಧವಾರ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.
ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಮಹಿಷ ಭಕ್ತರು ಮಹಿಷ ಹಾಗೂ ಬುದ್ದನ ಪರ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ತಲುಪಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಒನಕೆ ಓಬವ್ವ ವೃತ್ತಕ್ಕೆ ಮರಳಿ ಮಹಿಷ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರ.
‘ಮಹಿಷ ಉತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಗಿದೆ. ಮುಂದೆ ಇದನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು’ ಎಂದು ದಲಿತ ಸಂಘರ್ಷ ಸಮಿತಿಯ ಬಾಳೆಕಾಯಿ ಶ್ರೀನಿವಾಸ್ ಹೇಳಿದರು.
ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಶಿವಕುಮಾರ್ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ಘಟಕದ ಅಧ್ಯಕ್ಷ ಮಹಲಿಂಗಪ್ಪ, ಉಪಾಧ್ಯಕ್ಷ ಕೆ.ರಾಜಣ್ಣ, ದಲಿತ ಒಕ್ಕೂಟಗಳ ಅಧ್ಯಕ್ಷ ಮಹಾಂತೇಶ್, ಟಿಪ್ಪು ಖಾಸಿಂ ಅಲಿ ಇದ್ದರು.