ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಜಾಜೂರು: ಸಂಭ್ರಮದ ಸಂಕ್ರಾಂತಿ ಆಚರಣೆ

Published 16 ಜನವರಿ 2024, 5:29 IST
Last Updated 16 ಜನವರಿ 2024, 5:29 IST
ಅಕ್ಷರ ಗಾತ್ರ

ಚಿಕ್ಕಜಾಜೂರು: ಗ್ರಾಮದ ಸಹಸ್ರಾರು ಭಕ್ತರು ಸೋಮವಾರ ಸಂಭ್ರಮದಿಂದ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ದೇವಾಲಯಗಳಿಗೆ ತೆರಳಿ ದೇವರುಗಳ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ಇಲ್ಲಿನ ಗ್ರಾಮ ದೇವರು ಆಂಜನೇಯಸ್ವಾಮಿ, ಬನಶಂಕರಿ ಅಮ್ಮ, ರಾಮಕೃಷ್ಣ ದೇವಾಲಯ ಹಾಗೂ ವೀರಭಧ್ರಸ್ವಾಮಿ ದೇವಾಲಯಗಳಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಪೂಜೆಯನ್ನು ನಡೆಸಲಾಯಿತು. ವಿಶೇಷ ಪೂಜೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಶೇಷ ಅಲಂಕಾರ: ಪ್ರತಿ ವರ್ಷದಂತೆ ದೇವಾಲಯಗಳಲ್ಲಿ ಚಿತ್ತಾಕರ್ಷಕ ಅಲಂಕಾರ ಮಾಡಲಾಗಿತ್ತು. ಶುಕ್ರವಾರ ಸಂಜೆಯಿಂದಲೇ ದೇವಾಲಯಗಳಲ್ಲಿ ಬಗೆ ಬಗೆಯ ಬಣ್ಣಗಳಿಂದ ರಂಗೋಲಿ ಬಿಡಿಸಿ, ಹೂವು ಹಾಗೂ ವಿದ್ಯುತ್ ದೀಪಗಳಿಂದ ದೇವಾಲಯವನ್ನು ಅಲಂಕಾರ ಮಾಡಲಾಗಿತ್ತು. ಆಂಜನೇಯ ಸ್ವಾಮಿ ಮೂರ್ತಿಗೆ ಬೆಣ್ಣೆ, ದ್ರಾಕ್ಷಿಯಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಮುಂಜಾನೆ 6ಕ್ಕೆ ಅರ್ಚಕರು ಮಹಾಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದರು.

ಹರಿದು ಬಂದ ಜನಸಾಗರ: ವಿಶೇಷ ಪೂಜೆಗೆ ಹೋಬಳಿಯ ವಿವಿಧ ಗ್ರಾಮಗಳಿಂದ ಭಕ್ತರು ಬಂದು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಪ್ರತಿ ದೇವಾಲಯದಲ್ಲೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಲಾಡು, ಪೊಂಗಲ್, ಪುಳಿಯೊಗರೆಯನ್ನು ಪ್ರಸಾದವಾಗಿ ದೇವಸ್ಥಾನ ಸಮಿತಿಯವರು ವಿತರಿಸಿದರು.

ಚಿಕ್ಕಜಾಜೂರಿನ ಬನಶಂಕರಿ ಅಮ್ಮನವರನ್ನು ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು
ಚಿಕ್ಕಜಾಜೂರಿನ ಬನಶಂಕರಿ ಅಮ್ಮನವರನ್ನು ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು
ಚಿಕ್ಕಜಾಜೂರಿನ ರಾಮಕೃಷ್ಣ ದೇವಸ್ಥಾನದಲ್ಲಿ ಮೂರ್ತಿಗೆ ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು
ಚಿಕ್ಕಜಾಜೂರಿನ ರಾಮಕೃಷ್ಣ ದೇವಸ್ಥಾನದಲ್ಲಿ ಮೂರ್ತಿಗೆ ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT