ಗುರುವಾರ , ಫೆಬ್ರವರಿ 27, 2020
19 °C

ಮಲ್ಲಿಕಾರ್ಜುನ ಖರ್ಗೆ ಆರಿದ ದೀಪ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಲ್ಲಿಕಾರ್ಜುನ ಖರ್ಗೆ ರಾಜಕೀಯವಾಗಿ ಆರಿದ ದೀಪ. ಕತ್ತಲೆಯಲ್ಲಿ ಇರುವ ಖರ್ಗೆ, ದುಃಖದಲ್ಲಿ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ‘ನರೇಂದ್ರ ಮೋದಿಯವರು ಜೀರೋ ಕ್ಯಾಂಡಲ್ ಬಲ್ಬ್ ಇದ್ದಹಾಗೆ, ಬೆಳಕು ನೀಡುವುದಿಲ್ಲ’ ಎಂಬ ಖರ್ಗೆ ಟೀಕೆಗೆ ಕಟೀಲ್ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಖರ್ಗೆ ಅವರು ಕತ್ತಲೆಯಲ್ಲಿ ಇದ್ದಾರೆ. ಅವರನ್ನು ರಾಜಕೀಯವಾಗಿ ಮೇಲೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿಲ್ಲ. ರಾಜ್ಯಸಭಾ ಸದಸ್ಯರನ್ನಾಗಿ ಕೂಡ ಆಯ್ಕೆ ಮಾಡಲಿಲ್ಲ. ಮೋದಿ ಸಾವಿರ ವೋಲ್ಟೇಜ್ ಹಾಲೋಜಿನ್ ಬಲ್ಬ್ ಇದ್ದ ಹಾಗೆ. ಜಗತ್ತಿಗೆ ಬೆಳಕು ನೀಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಮತ್ತೊಂದು ಮುಖ ಜೆಡಿಎಸ್. ಈ ಪಕ್ಷದ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎಂದು ಹೇಳುವುದಿಲ್ಲ. ರಾಷ್ಟಧ್ವಜ ಹಾರಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನು ಎಚ್.ಡಿ.ದೇವೇಗೌಡ ಅನುಸರಿಸುತ್ತಿದ್ದಾರೆ. ಹಿಂದೂ ಮುಸ್ಲಿಂ ಭೇದ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರ ಆಲೋಚನೆಯಂತೆಯೇ ಸಚಿವ ಸಂಪುಟ ವಿಸ್ತರಣೆ ನಡೆದಿದೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಅನ್ಯ ಪಕ್ಷದ ಮುಖಂಡರು ಬಿಜೆಪಿ ಸೇರಿದರೆ ಹಾಲು- ಸಕ್ಕರೆ ಬೆರೆತಂತೆ. ಹಾಲು ಮಾತ್ರ ಕಾಣಿಸುತ್ತದೆ ಹೊರತು ಸಕ್ಕರೆ ಅಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಥಿತಿ ನೋಡಿದರೆ ಅಯ್ಯೋ ಅನಿಸುತ್ತದೆ. ಶಾಸಕಾಂಗ ಪಕ್ಷದ ನಾಯಕರಾಗಲು ಹೈಕಮಾಂಡ್ ಎದುರು ಮಂಡಿಯೂರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ನೇಮಕ ಮಾಡಲು ಕಾಂಗ್ರೆಸ್‌ಗೆ ಇನ್ನೂ ಸಾಧ್ಯವಾಗಿಲ್ಲ. ಮೊದಲು ನಿಮ್ಮ ಪಕ್ಷಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಂಡು ನಂತರ ಮಾತನಾಡಿ ಎಂದು ಕಿಡಿಕಾರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು