ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ತಡೆಯುವಲ್ಲಿ ಬಿಜೆಪಿ ವಿಫಲ: ಸಿ.ವೈ.ಶಿವರುದ್ರಪ್ಪ

ಎಐಟಿಯುಸಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ ಆರೋಪ
Last Updated 1 ಮೇ 2022, 12:38 IST
ಅಕ್ಷರ ಗಾತ್ರ

ಚಿತ್ರದುರ್ಗ: ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವುದಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಭ್ರಷ್ಟಾಚಾರ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇನ್ನಷ್ಟು ಮಿತಿಮೀರಿದೆ ಎಂದು ಎಐಟಿಯುಸಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಮಿಕರ ಸಾಮೂಹಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಎಐಟಿಯುಸಿ ಕಚೇರಿಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜನರಿಗೆ ನಿರೀಕ್ಷೆ ಮೀರಿದ ಭರವಸೆ ನೀಡಿದ್ದ ಸರ್ಕಾರ ಮಾತಿಗೆ ತಪ್ಪಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ನೀಡಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಿರುದ್ಯೋಗ, ಬಡತನ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಗಲಭೆಗಳಿಗೆ ಕುಮ್ಮಕ್ಕು ನೀಡಲಾಗುತ್ತಿದೆ’ ಎಂದು ಹೇಳಿದರು.

ರಾಜ್ಯ ಸರ್ಕಾರದ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಹಲವು ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಮಾಹಿತಿ ಇದ್ದರೂ ತಡೆಯಲು ಸಾಧ್ಯವಾಗಿಲ್ಲ. ವಿರೋಧ ಪಕ್ಷಗಳು ಕೂಡ ಮೌನವಹಿಸಿವೆ. ಇಂಧನ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿವೆ. ಬಡ ಮತ್ತು ಮಧ್ಯಮವರ್ಗದ ಬದುಕು ದುಸ್ತರವಾಗುತ್ತಿದೆ’ ಎಂದು ಹೇಳಿದರು.

‘ಸರ್ವರಿಗೂ ಸೂರು ನೀಡುವುದಕ್ಕೆ ಸರ್ಕಾರ ಕೊರೊನಾ ಸೋಂಕಿನ ನೆಪ ಹೇಳಿತ್ತು. ಕೋವಿಡ್‌ ಸಂಕಷ್ಟ ಮುಗಿದರೂ ವಸತಿ ಯೋಜನೆಗಳ ಅನುಷ್ಠಾನಗೊಳ್ಳುತ್ತಿಲ್ಲ. ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಮೇ 10ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜಿ.ಸಿ.ಸುರೇಶ್‌ ಬಾಬು, ಮುಖಂಡರಾದ ಎಸ್.ಸಿ.ಕುಮಾರ್, ಜಾಫರ್ ಷರೀಫ್, ಭಾಗ್ಯಮ್ಮ ಉಮಾಪತಿ, ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ್, ಎಐಕೆಎಸ್ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ,ಸತ್ಯಕೀರ್ತಿ, ಭಾಗ್ಯಮ್ಮ, ಜಮುನಾಬಾಯಿ ಇದ್ದರು.

**

ದುಡಿಯುವ ವರ್ಗವನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಹಮಾಲರಿಗೆ ಮನೆ ನೀಡಿದರೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಪಿಂಚಣಿ ಸಕಾಲಕ್ಕೆ ಕೈಸೇರುತ್ತಿಲ್ಲ. ಹೋರಾಟ ತೀವ್ರಗೊಳಿಸುವ ಅಗತ್ಯವಿದೆ.
ಜಿ.ಸಿ.ಸುರೇಶ್‌ ಬಾಬು,ಎಐಟಿಯುಸಿ ಪ್ರಧಾನ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT