ಜನರಿಗೆ ಗುಣಮಟ್ಟದ ಆಹಾರ ಪೂರೈಕೆಯಾಗಲಿ 

7
ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌

ಜನರಿಗೆ ಗುಣಮಟ್ಟದ ಆಹಾರ ಪೂರೈಕೆಯಾಗಲಿ 

Published:
Updated:
Deccan Herald

ಹೊಸದುರ್ಗ: ಇಂದಿರಾ ಕ್ಯಾಂಟೀನ್‌ನಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಸಲಹೆ ನೀಡಿದರು.

ಪಟ್ಟಣದ ಪುರಸಭೆ ಸಮೀಪ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಅನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ವಿವಿಧ ಕೆಲಸ, ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ಗ್ರಾಮೀಣ ಜನರಿಗೆ ಇಂದಿರಾ ಕ್ಯಾಂಟೀನ್‌ನಿಂದ ಅನುಕೂಲ ಆಗಲಿದೆ. ಕಡಿಮೆ ದರದಲ್ಲಿ ತಿಂಡಿ ಹಾಗೂ ಊಟ ನೀಡುವುದರೊಂದಿಗೆ ಬಡಜನರಿಗೆ ಸಹಕಾರಿಯಾಗುತ್ತದೆ. ಈ ಕ್ಯಾಂಟೀನ್‌ ಸ್ಥಾಪನೆಯ ಮೂಲ ಉದ್ದೇಶ ಸಾಕಾರಗೊಳ್ಳಬೇಕಾದರೆ ರುಚಿ, ಶುಚಿಯಾಗಿ ಆಹಾರ ತಯಾರಿಸಬೇಕು. ಹಾಗೆಯೇ, ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಿದರು.

ನಾಮಫಲಕ ಅನಾವರಣ ಮಾಡಿದ ಸಂಸದ ಬಿ.ಎನ್.ಚಂದ್ರಪ್ಪ, ‘ಹಿಂದಿನ ಕಾಂಗ್ರೆಸ್ ಸರ್ಕಾರ ಈ ಯೋಜನೆ ಜಾರಿಗೆ ತಂದಿದ್ದು, ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಮೂಲಕ ₹5ಕ್ಕೆ ಉಪಾಹಾರ, ₹10ಕ್ಕೆ ಊಟ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಬಡವರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್, ಪುರಸಭೆ ಮುಖ್ಯಾಕಾರಿ ಡಿ. ಉಮೇಶ್, ಪುರಸಭೆ ಸದಸ್ಯರಾದ ಶ್ರೀನಿವಾಸ್, ಜಾಫರ್, ನಾಗರಾಜ್, ದಾಳಿಂಬೆ ಗಿರೀಶ್, ಮಂಜುನಾಥ್, ಸರೋಜಮ್ಮ, ಜ್ಯೋತಿ, ಸ್ವಾತಿ, ಪೂರ್ಣಿಮಾ, ರಾಮಚಂದ್ರ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !