ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BSY ಅಧಿಕಾರ ಬಿಡುವ ಗ್ಯಾರಂಟಿ ನಿಮಗಿತ್ತಾ: ವಿಜಯೇಂದ್ರ ಹೇಳಿಕೆಗೆ ಪಾಟೀಲ ಪ್ರಶ್ನೆ

ಶಾಸಕ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ ಪ್ರಶ್ನೆ
Published 3 ಜೂನ್ 2023, 14:14 IST
Last Updated 3 ಜೂನ್ 2023, 14:14 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಬಿ.ಎಸ್‌.ಯಡಿಯೂರಪ್ಪ ಅಧಿಕಾರ ಹಸ್ತಾಂತರ ಮಾಡುವಾಗ ಕಣ್ಣೀರು ಹಾಕಿದರು. ಅವರು ಅಧಿಕಾರ ಬಿಟ್ಟು ಕೊಡುತ್ತಾರೆ ಎಂಬ ಗ್ಯಾರಂಟಿ ನಿಮಗಿತ್ತಾ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಎಂ.ಬಿ.ಪಾಟೀಲ, ಶಾಸಕ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದ ಅವಧಿ ಪೂರ್ಣಗೊಳಿಸುವುದಿಲ್ಲ’ ಎಂದು ವಿಜಯೇಂದ್ರ ಅವರು ಈಚೆಗೆ ನಗರದಲ್ಲಿ ನೀಡಿದ್ದ ಹೇಳಿಕೆ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಒಮ್ಮೆಯೂ ಪೂರ್ಣಾವಧಿ ಅಧಿಕಾರ ಪೂರ್ಣಗೊಳಿಸಲಿಲ್ಲವಲ್ಲ? ಎಂದು ಪ್ರಶ್ನಿಸಿದರು.

‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್‌ ಈಗಾಗಲೇ ಸ್ಪಷ್ಟಪಡಿಸಿದೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT