ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಭೇಟಿ: ಸ್ಥಳ ಪರಿಶೀಲನೆ

Last Updated 19 ಮೇ 2022, 3:06 IST
ಅಕ್ಷರ ಗಾತ್ರ

ಧರ್ಮಪುರ: ಇಲ್ಲಿನ ಐತಿಹಾಸಿಕ ಕೆರೆಗೆ ನೀರು ಹರಿಸುವ ಕಾಮಗಾರಿ ಭೂಮಿಪೂಜೆ ನೆರವೇರಿಸಲು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಜೂನ್ 4ರಂದು ಧರ್ಮಪುರಕ್ಕೆ ಬರುತ್ತಿರುವ ಕಾರಣ ಜಿಲ್ಲಾಧಿಕಾರಿ ಕವಿತ ಎಸ್. ಮನ್ನಿಕೇರಿಬುಧವಾರ ಸ್ಥಳ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿ ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲು ಹೊಸಹಳ್ಳಿ ಬ್ಯಾರೇಜ್‌ಗೆ ಭೇಟಿ ನೀಡುತ್ತಿರುವುದರಿಂದ ಹೊಸಹಳ್ಳಿ, ಗೂಳ್ಯ, ಸೂಗೂರು,
ಮುಂಗುಸುವಳ್ಳಿ, ಧರ್ಮಪುರ, ಹರಿಯಬ್ಬೆ, ತೋಪಿನಗೊಲ್ಲಾಹಳ್ಳಿ ಗೇಟ್ ಮತ್ತಿತರ ಕಡೆ ಕಾರ್ಯಕ್ರಮ ನಡೆಸಲು ಸ್ಥಳ ಗುರುತಿಸಲಾಗಿದೆ. ಒಂದು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಜತೆಗೆ ಅಂದು ಮಿನಿ ವಿಧಾನಸೌಧದ ಭೂಮಿಪೂಜೆ ಸೇರಿ ಒಟ್ಟು 29 ವಿವಿಧ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳು ನೆರವೇರಲಿವೆ ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್ ಎನ್. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಭೀಮರಾಜ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನವೀನ್ ಕುಮಾರ್ , ಅನಂತರಾಜು, ಶ್ರೀಕಾಂತರೆಡ್ಡಿ,ಪಿಡಿಒ ರಾಜೇಶ್ವರಿ, ವರದರಾಜು, ಕಾವ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT