ಕ್ಷಯ ಸಂಪೂರ್ಣ ಗುಣಮುಖವಾಗುವ ಕಾಯಿಲೆ

7
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಎನ್. ರವೀಂದ್ರ

ಕ್ಷಯ ಸಂಪೂರ್ಣ ಗುಣಮುಖವಾಗುವ ಕಾಯಿಲೆ

Published:
Updated:
ಚಿತ್ರದುರ್ಗದಲ್ಲಿ ಬುಧವಾರ ಕ್ಷಯ ರೋಗಗಳ ಪತ್ತೆ ಹಚ್ಚುವ ಸಮೀಕ್ಷೆ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಎನ್. ರವೀಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿತ್ರದುರ್ಗ: ವೈದ್ಯರ ಮಾರ್ಗದರ್ಶನದಲ್ಲಿ ಸಮಯಕ್ಕೆ ಸರಿಯಾಗಿ ಔಷಧ ಪಡೆದರೆ, ಕ್ಷಯ ರೋಗವನ್ನು ಸಂಪೂರ್ಣವಾಗಿ ಗುಣ ಪಡಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಎನ್. ರವೀಂದ್ರ ತಿಳಿಸಿದರು.

ಕ್ಷಯ ರೋಗಗಳ ಪತ್ತೆ ಹಚ್ಚುವ ಸಮೀಕ್ಷೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಜುಲೈ 2 ರಿಂದ 13ರವರೆಗೆ ರೋಗಿಗಳನ್ನು ಪತ್ತೆ ಹಚ್ಚುವ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

‘ಕಳೆದ ವರ್ಷದ ಕಾರ್ಯಕ್ರಮದಡಿ 109 ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಚಳ್ಳಕೆರೆ 46, ಚಿತ್ರದುರ್ಗ 34, ಮೊಳಕಾಲ್ಮುರು ತಾಲ್ಲೂಕಿನಲ್ಲಿ 13 ಮಂದಿ ಪತ್ತೆಯಾಗಿದ್ದರು. ಉಳಿದ ತಾಲ್ಲೂಕುಗಳಲ್ಲಿ ಕಡಿಮೆ ಪ್ರಮಾಣದಲ್ಲಿತ್ತು’ ಎಂದು ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ.ಆರ್. ರಂಗನಾಥ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಖಾಸಗಿ ವೈದ್ಯರು ಸೇರಿ ಬಸವೇಶ್ವರ ವೈದ್ಯಕೀಯ ಕಾಲೇಜುಗಳಲ್ಲಿ ಕ್ಷಯರೋಗಿಗಳು ಕಂಡು ಬಂದಲ್ಲಿ ಅವರಿಗೆ ಪ್ರತ್ಯೇಕವಾದ ರಿಜಿಸ್ಟರ್ ನಿರ್ವಹಣೆ ಮಾಡಿ ರೋಗಿಗಳ ವಿಳಾಸ, ದೂರವಾಣಿ ಸಂಖ್ಯೆ ದಾಖಲೆ ಮಾಡಿಕೊಳ್ಳಬೇಕು. ಈ ಮಾಹಿತಿಯನ್ನು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗೆ ಕಡ್ಡಾಯವಾಗಿ ಪ್ರತಿ ತಿಂಗಳೂ ನೀಡಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಡಿಎಚ್‌ಒ ಡಾ.ಬಿ.ವಿ. ನೀರಜ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧಾ, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ಔಷಧ ವ್ಯಾಪಾರಿಗಳು, ಸರ್ಕಾರಿ ವೈದ್ಯರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !