ನಡುರಾತ್ರಿ ಮನೆಗೆ ನುಗ್ಗಿ ದರೋಡೆ
ಶ್ರೀರಾಂಪುರ: ಮತ್ತೋಡು ಹೋಬಳಿಯ ಕರ್ಪೂರದಕಟ್ಟೆ ಗ್ರಾಮದಲ್ಲಿ ಶನಿವಾರ ನಡುರಾತ್ರಿ ದರೋಡೆಕೋರರ ಗುಂಪೊಂದು ಒಂಟಿ ಮನೆಗೆ ನುಗ್ಗಿ ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನ, ನಗದು ದೋಚಿ ಪರಾರಿಯಾಗಿದೆ.
ಗ್ರಾಮದ ಚಂದ್ರಶೇಖರಯ್ಯ ಅವರ ತೋಟದ ಮನೆಗೆ ನುಗ್ಗಿದ 5 ಜನ ಮುಸುಕುಧಾರಿ ದರೋಡೆಕೋರರ ಗುಂಪು ಹಿಂದಿನ ಬಾಗಿಲನ್ನು ಮುರಿದು ಒಳನುಗ್ಗಿ ಮನೆಯವರಿಗೆ ಮಾರಕಾಸ್ತ್ರಗಳನ್ನು ತೋರಿಸಿ, ಮೌಲ್ಯದ ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಡಿವೈಎಸ್ಪಿ ರೋಷನ್ ಜಮೀರ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಫೈಜುಲ್ಲಾ, ಶ್ರೀಧರ ಶಾಸ್ತ್ರಿ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದವರು ಭೇಟಿ ನೀಡಿ ಪರಿಶೀಲಿಸಿದರು.
ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.