ಸಿದ್ದರಾಮಯ್ಯಗೆ ಮತಿಭ್ರಮಣೆ: ಶ್ರೀರಾಮುಲು ಆರೋಪ

ಚಿತ್ರದುರ್ಗ: ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಹುಶಃ ಅವರಿಗೆ ಮತಿಭ್ರಮಣೆ ಆಗಿರಬೇಕು ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸಿದರು. ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಹಾಗೂ ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವ ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಸಿ.ಡಿ. ವಿಚಾರವಾಗಿ ಬಸವನಗೌಡ ಪಾಟೀಲ ಯತ್ನಳ ನೀಡಿದ ಹೇಳಿಕೆಗಳನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಇವು ಹಿಟ್ ಅಂಡ್ ರನ್ ಹೇಳಿಕೆಗಳು. ಇಂತಹ ಆಧಾರ ರಹಿತ ಆರೋಪಗಳಿಗೆ ಆದ್ಯತೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.