ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರನ್ನು ಮಾದರಿ ಕ್ಷೇತ್ರವಾಗಿಸಲು ಪ್ರಯತ್ನ: ಸಚಿವ ಶ್ರೀರಾಮುಲು

₹ 25 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶ್ರೀರಾಮುಲು ಚಾಲನೆ
Last Updated 4 ಜುಲೈ 2022, 4:12 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ನಾನು ಮೊಳಕಾಲ್ಮುರು ಕ್ಷೇತ್ರದ ಶಾಸಕನಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ವಿವಿಧೆಡೆ ₹ 25 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ತುಂಗ–ಭದ್ರಾ ಹಿನ್ನೀರು ಕುಡಿಯುವ ನೀರಿನ ಯೋಜನೆ, ಭದ್ರಾ ಮೇಲ್ದಂಡೆ ಮೂಲಕ ಕೆರೆಗಳಿಗೆ ನೀರು ನೀಡುವ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರ ಲೋಕಾರ್ಪಣೆಯಾಗಲಿದೆ. ವಸತಿ ನಿಲಯ, ರಸ್ತೆ ಕಾಮಗಾರಿ, ಆಸ್ಪತ್ರೆ ಕಟ್ಟಡ, ಸಮುದಾಯ ಭವನಗಳಿಗೆ ಆದ್ಯತೆ ನೀಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕ್ಷೇತ್ರದ ಜನರ ನಿರೀಕ್ಷೆಯನ್ನು ಹುಸಿ ಮಾಡಿಲ್ಲ ಎಂಬ ಸಮಾಧಾನವಿದೆ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿದರು. ಇದೇ ವೇಳೆ ಕೋನಸಾಗರದಲ್ಲಿ ವಿಎಸ್ಎಸ್‌ಎನ್ ಬ್ಯಾಂಕ್ ಉದ್ಘಾಟನೆ, ನೇರ್ಲಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಉದ್ಘಾಟನೆ, ಮೊಳಕಾಲ್ಮುರಿನಲ್ಲಿ ನೂತನವಾಗಿ ನಿರ್ಮಿಸಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಉದ್ಘಾಟನೆ, ಹಿರೇಕೆರೆಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನೆ, ಅಶೋಕ ಸಿದ್ದಾಪುರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿಗೃಹ ಲೋಕಾರ್ಪಣೆ, ದೇವಸಮುದ್ರದಲ್ಲಿ ಇಂದಿರಾಗಾಂಧಿ ವಸತಿಶಾಲೆ ಕಟ್ಟಡ ಉದ್ಘಾಟನೆ ನೆರವೇರಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ. ಲಕ್ಷ್ಮಣ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಟಿ.ಎಚ್. ನಾಗೇಂದ್ರನಾಯ್ಕ, ತಾಲ್ಲೂಕು ಅಧಿಕಾರಿ ಡಿ. ಚಿದಾನಂದಪ್ಪ, ಎಸ್‌ಸಿ ಅಧಿಕಾರಿ ಮಾಲತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT