ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ₹13 ಕೋಟಿ ವೆಚ್ಚದ ಹಾಸ್ಟೆಲ್ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

Published 12 ಮಾರ್ಚ್ 2024, 14:14 IST
Last Updated 12 ಮಾರ್ಚ್ 2024, 14:14 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣದ ಹೊರವಲಯದ ಹೊಸದುರ್ಗ ರಸ್ತೆಯಲ್ಲಿ ₹13 ಕೋಟಿ ವೆಚ್ಚದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಶಾಸಕ ಎಂ.ಚಂದ್ರಪ್ಪ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

‘ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜಾಗದ ಕೊರತೆ ಇದೆ. ಆದ್ದರಿಂದ ವಿದ್ಯಾರ್ಥಿ ನಿಲಯಗಳನ್ನು ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿದೆ. ಹನುಮಂತ ದೇವರ ಕಣಿವೆ, ಬೊಮ್ಮನಕಟ್ಟೆ, ಬಿ.ದುರ್ಗ ಸಮೀಪದ ಗುಡ್ಡಗಳಲ್ಲಿ ವಸತಿ ಶಾಲೆ, ಕಾಲೇಜುಗಳನ್ನು ನಿರ್ಮಿಸಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯಗಳು ಪಟ್ಟಣದಿಂದ ಹೊರಗೆ ಪ್ರಶಾಂತ ವಾತಾವರಣದಲ್ಲಿ ಇದ್ದರೆ ಮಕ್ಕಳಿಗೆ ಓದಲು ಅನುಕೂಲ ಆಗಲಿದೆ. ಪಟ್ಟಣದಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಗಳನ್ನುನಿರ್ಮಿಸಲಾಗಿದೆ’ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಶೈಲೇಶ್, ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಮೋಹನ್ ಕುಮಾರ್, ಮಾದಿ ಹಳ್ಳಪ್ಪ, ಧನಂಜಯಪ್ಪ, ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT