ಭಾನುವಾರ, ಆಗಸ್ಟ್ 1, 2021
27 °C

ಯೂರಿಯಾ ಪೂರೈಕೆಗೆ ಸಚಿವರಿಗೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲೆಗೆ ತುರ್ತಾಗಿ 2,500 ಮೆಟ್ರಿಕ್‌ ಟನ್‌ ಯೂರಿಯಾ ರಸಗೊಬ್ಬರ ಪೂರೈಕೆ ಮಾಡುವಂತೆ ಕೋರಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದೆ. ಮೆಕ್ಕೆಜೋಳ, ಶೇಂಗಾ ಹಾಗೂ ರಾಗಿ ಬೆಳೆ ಬಿತ್ತನೆ ಮಾಡಿದ್ದಾರೆ. ಬೆಳೆಗೆ ಯೂರಿಯಾ ಗೊಬ್ಬರ ನೀಡಲು ಇದು ಸಕಾಲ. ಆದರೆ, ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಕೊರತೆ ಉಂಟಾಗಿದೆ. ಇದರಿಂದ ರೈತ ಸಮುದಾಯ ಆತಂಕಗೊಂಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜಿಲ್ಲೆಗೆ ಸುಮಾರು 2,500 ಮೆಟ್ರಿಕ್‌ ಟನ್‌ ಯೂರಿಯಾ ರಸಗೊಬ್ಬರದ ಅಗತ್ಯವಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ. ಆದರೆ, 100 ಮೆಟ್ರಿಕ್‌ ಟನ್‌ ಯೂರಿಯಾ ಮಾತ್ರ ದಾಸ್ತಾನು ಇದೆ. ರಸಗೊಬ್ಬರಕ್ಕೆ ಕೊರತೆ ಉಂಟಾದರೆ ರೈತರು ಅಸಮಧಾನಗೊಳ್ಳುವ ಸಾಧ್ಯತೆ ಇದೆ. ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಬಹುದು ಎಂದು ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದೆ ಎಂದು ಸಚಿವರ ಗಮನ ಸೆಳೆದಿದ್ದಾರೆ.

ರೈತರ ಬೇಡಿಕೆಗೆ ಅಗತ್ಯವಿರುವಷ್ಟು ರಸಗೊಬ್ಬರನ್ನು ಕೂಡಲೇ ಪೂರೈಕೆ ಮಾಡಬೇಕು. ಮಂಗಳೂರಿನ ಬಂದರಿನಿಂದ ನೇರವಾಗಿ ಚಿತ್ರದುರ್ಗ ರೈಲ್ವೆ ರೇಕ್‌ ಪಾಯಿಂಟ್‌ಗೆ ಗೊಬ್ಬರ ಬರಬೇಕು. ಅಗತ್ಯ ಸಹಕಾರ ನೀಡಬೇಕು ಎಂದು ಸಚಿವರನ್ನು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು