ಚಳ್ಳಕೆರೆ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಟಿ.ರಘುಮೂರ್ತಿ ಸರ್ಕಾರಕ್ಕೆ ಗುರುವಾರ ಒತ್ತಾಯಿಸಿದರು.

‘ಯೋಜನೆ ಆರಂಭವಾಗಿ 2 ದಶಕ ಕಳೆದರೂ ಯಾವ ಸರ್ಕಾರಗಳೂ ಪೂರ್ಣ ಮಾಡಿಲ್ಲ. ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿರುವ ₹5,300 ಕೋಟಿ ಬಿಡುಗಡೆ ಮಾಡಿಲ್ಲ. ಯೋಜನೆಯ ಬಗ್ಗೆ ನಮ್ಮ ಸರ್ಕಾರಕ್ಕೆ ಕೇಳಿದರೆ ಅನುದಾನ ಲಭ್ಯತೆಯ ಆಧಾರದ ಮೇಲೆ ಕಾಮಗಾರಿ ಮುಗಿಸಿ 2028ಕ್ಕೆ ಪೂರ್ಣಗೊಳಿಸುವುದಾಗಿ ಹೇಳುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಬೇರೆ ರಾಜ್ಯಗಳ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಕೇವಲ ಮಾತಿನಲ್ಲಿ ಉಳಿದಿದೆ. ಚುನಾವಣೆ ಸಮಯದಲ್ಲಿ ಬಿಜೆಪಿ ನಾಯಕರು ಯೋಜನೆಗೆ ₹5,300 ಕೋಟಿ ಅನುದಾನ ನೀಡುವ ಸುಳ್ಳು ಆಶ್ವಾಸನೆ ನೀಡಿ ಪ್ರಚಾರ ನಡೆಸಿದರು. ಆದರೆ ಬಿಜೆಪಿ ಸೋಲು ಕಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಶಾಖಾ ಕಾಲುವೆ ಪೂರ್ಣಗೊಳಿಸಿ 157 ಕೆರೆಗಳಿಗೆ ನೀರು ತುಂಬಿಸುವುದಾಗಿ ಹೇಳಿದ್ದಾರೆ. ಆದರೆ ಅದಕ್ಕೆ ಅನುದಾನ ಎಷ್ಟು ಎಂಬುದನ್ನು ಎಲ್ಲಿಯೂ ತಿಳಿಸಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುದಾನ ಬಿಡುಗಡೆ ವಿಚಾರದಲ್ಲಿ ವಾಕ್ಸಮರ ಮಾಡಿಕೊಂಡು ಹೋದರೆ ಯೋಜನೆ ಪೂರ್ಣ ಆಗುವುದು ಯಾವಾಗ’ ಎಂದು ಪ್ರಶ್ನಿಸಿದರು.

ಶಾಸಕರ ಪ್ರಶ್ನೆಗೆ ಸರ್ಕಾರದ ಪರವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ‘ಭದ್ರಾ ಮೇಲ್ದಂಡೆಯನ್ನು ಮಹತ್ವದ ಯೋಜನೆ ಎಂದು ಪರಿಗಣಿಸಿದ್ದು, ಕಾಮಗಾರಿ ಹಾಗೂ ಅನುದಾನದ ಬಿಡುಗಡೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದಿಲ್ಲ. ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ 3 ಪ್ಯಾಕೇಜ್ನಲ್ಲಿ ₹1848.44 ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನುಳಿದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಕೆಲಸ ಶುರು ಮಾಡಲಿದ್ದು, ಅದಷ್ಟು ಬೇಗ ಪೂರ್ಣಗೊಳಿಸಲಾಗುವುದು’ ಎಂದರು.

ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಶಾಸಕ ಟಿ.ರಘುಮೂರ್ತಿ, ಮುಖ್ಯಮಂತ್ರಿ ಬಜೆಟ್ನಲ್ಲಿ ಕೇವಲ ಘೋಷಣೆ ಮಾಡಿದ್ದಾರೆ. ಅನುದಾನ ಎಷ್ಟು ಎಂದು ಹೇಳಿಲ್ಲ. ಸದನದಲ್ಲಿ ಮುಖ್ಯಮಂತ್ರಿ ಇದಕ್ಕೆ ಉತ್ತರ ನೀಡಬೇಕು. ಜೊತೆಗೆ ಚಿತ್ರದುರ್ಗ ಶಾಖಾ ಕಾಲುವೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.