ಸೋಮವಾರ, ಮೇ 17, 2021
23 °C

ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಯತ್ನ; ಮರಳು ನೀತಿ ಖಂಡಿಸಿ ಹೊಸದುರ್ಗ ಬಂದ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಯತ್ನಕ್ಕೆ ರಾಜ್ಯ ಸರ್ಕಾರದ ಮರಳು ನೀತಿಯೇ ಕಾರಣ ಎಂದು ಆರೋಪಿಸಿ ಬಿಜೆಪಿ ಹೊಸದುರ್ಗ ಬಂದ್ ನಡೆಸುತ್ತಿದೆ.

ಬೆಳಿಗ್ಗೆ ತೆರೆದಿದ್ದ ಅಂಗಡಿಗಳು ಬಾಗಿಲು ಮುಚ್ಚುತ್ತಿವೆ. ಬಿಜೆಪಿ ಕಾರ್ಯಕರ್ತರು ಟಿಬಿ ರಸ್ತೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಒತ್ತಾಯ ಪೂರ್ವಕವಾಗಿ ಬಂದ್ ನಡೆಸಿದರೆ ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಎಸ್‌ಪಿ ಅರುಣ್ ಎಚ್ಚರಿಕೆ ನೀಡಿದ್ದಾರೆ. 

ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. 

ಪೆಟ್ರೋಲ್ ಕಣ್ಣಿಗೆ ಹೋಗಿದ್ದರಿಂದ ಗೂಳಿಹಟ್ಟಿ ಶೇಖರ್ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೂಳಿಹಟ್ಟಿ ವಿರುದ್ಧ ಐಪಿಸಿ 309 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಇದನ್ನೂ ಓದಿ: ಶಾಸಕ ಗೂಳಿಹಟ್ಟಿ ಡಿ.ಶೇಖರ್ ಆತ್ಮಹತ್ಯೆಗೆ ಯತ್ನ

ಮರಳು ಗಣಿಗಾರಿಕೆ ವಿಚಾರದಲ್ಲಿ ಅಮಾಯಕರ ಮೇಲೆ ಪೊಲೀಸರು ಕೇಸು ಹಾಕುತ್ತಿದ್ದ ವಿಚಾರಕ್ಕೆ ಆಕ್ರೋಶಗೊಂಡು ಹೊಸದುರ್ಗ ಠಾಣೆ ಎದುರು ಪ್ರತಿಭಟನೆ ನಡೆಸಿದ ಗೂಳಿಹಟ್ಟಿ, ಭಾನುವಾರ ರಾತ್ರಿ ಏಕಾಏಕಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡಿದ್ದಾರೆ. ಬೆಂಕಿ ಹಚ್ಚಿಕೊಳ್ಳಲು ಮುಂದಾದ ಶಾಸಕರನ್ನು ತಕ್ಷಣ ಬೆಂಬಲಿಗರು ಹಾಗೂ ಪೊಲೀಸರು ತಡೆದಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು