ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ದೇಶದ ಪವಿತ್ರ ಶ್ರದ್ಧಾಕೇಂದ್ರ: ಶಾಸಕ ಎಂ.ಚಂದ್ರಪ್ಪ

Published 14 ಜನವರಿ 2024, 16:00 IST
Last Updated 14 ಜನವರಿ 2024, 16:00 IST
ಅಕ್ಷರ ಗಾತ್ರ

ಹೊಳಲ್ಕೆರೆ: ಅಯೋಧ್ಯೆಯ ರಾಮಮಂದಿರ ಹಿಂದೂಗಳ ಪವಿತ್ರ ಶ್ರದ್ಧಾಕೇಂದ್ರವಾಗಲಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ಪಟ್ಟಣದ ಬಸವಾ ಲೇಔಟ್‌ನಲ್ಲಿ ಭಾನುವಾರ ಮಂತ್ರಾಕ್ಷತೆ ಹಾಗೂ ಕರಪತ್ರ ವಿತರಿಸಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ದೇಶದ ಕೋಟ್ಯಂತರ ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾರೆ. ಕೋಟ್ಯಂತರ ಹಿಂದೂಗಳ ದೇಣಿಗೆಯಿಂದ ರಾಮಮಂದಿರ ನಿರ್ಮಾಣ ಆಗುತ್ತಿದೆ. ನಾನು ಕೂಡ ₹11,11,111 ದೇಣಿಗೆ ನೀಡಿದ್ದೇನೆ’ ಎಂದರು.

‘ರಾಮಜನ್ಮಭೂಮಿಗೆ ತನ್ನದೇ ಆದ ಪಾವಿತ್ರ್ಯತೆ ಇದೆ. ಮಂದಿರ ನಿರ್ಮಾಣದಿಂದ ಅಯೋಧ್ಯೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಲಿದೆ. ಮೋದಿ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿಯ ಹೆಸರು ನಾಮಕರಣ ಮಾಡುವ ಮೂಲಕ ಅವರ ಹೆಸರು ಚಿರಸ್ಥಾಯಿಯಾಗಿರುವಂತೆ ಮಾಡಿದ್ದಾರೆ’ ಎಂದು ಚಂದ್ರಪ್ಪ ಹೇಳಿದರು.

‘ರಾಮ ಎಲ್ಲರಿಗೂ ದೇವರು. ಇದರಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪ್ರಶ್ನೆ ಬರುವುದಿಲ್ಲ’ ಎಂದು ಮಾಜಿ ಕಾಂಗ್ರೆಸ್ ಶಾಸಕ ಉಮಾಪತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಪ್ರಧಾನ ಕಾರ್ಯದರ್ಶಿ ರೂಪಾ ಸುರೇಶ್, ಪ್ರವೀಣ್, ಮರುಳಸಿದ್ದಪ್ಪ, ಗಿರೀಶ್, ಲೋಕೇಶ್, ಮಾರುತೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT