ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಹಣೆಯಲ್ಲಿ ಬರೆದಿದ್ದರೆ ಸಚಿವ ಸ್ಥಾನ ಸಿಗುತ್ತೆ: ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ‘ನನ್ನ ಹಣೆಯಲ್ಲಿ ಬರೆದಿದ್ದರೆ, ಪಕ್ಷದ ವರಿಷ್ಠರು ಮನಸ್ಸು ಮಾಡಿದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬಹುದು’ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

‘ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆ.ಎಚ್. ರಂಗನಾಥ್, ಡಿ. ಮಂಜುನಾಥ್, ಡಿ. ಸುಧಾಕರ್ ಸಚಿವರಾಗಿದ್ದರು. ಯಾರೇ ಸಿಎಂ ಆಗಲಿ ಹಿರಿಯೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಗ್ಯಾರಂಟಿ ಎಂಬ ಮಾತಿತ್ತು. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕೇ ಬಿಟ್ಟಿತು ಎನ್ನುವಾಗ ಕೈತಪ್ಪಿತು’ ಎಂದು ‘ಪ್ರಜಾವಾಣಿ‘ಗೆ ಮಂಗಳವಾರ ಪ್ರತಿಕ್ರಿಯಿಸಿದರು.

‘ಬಿಎಸ್‌ವೈ ಅಧಿಕಾರ ತ್ಯಜಿಸಿದ್ದಕ್ಕೆ ವೈಯಕ್ತಿಕವಾಗಿ ಬೇಸರವಿದೆ. ನನ್ನ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದರು. ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧ’ ಎಂದು ಶಾಸಕರು ಸ್ಪಷ್ಟಪಡಿಸಿದರು.

‘ವಿನಯ್ ಗುರೂಜಿ ಒಂದು ತಿಂಗಳ ಹಿಂದೆಯೇ ನಿಮ್ಮನ್ನು ಸಚಿವರಾಗುತ್ತೀರಿ ಎಂದಿದ್ದರಲ್ಲವೆ?’ ಎಂಬ ಪ್ರಶ್ನೆಗೆ, ‘ಗುರುಗಳ ಆಶೀರ್ವಾದ, ದೈವಬಲ ನಮ್ಮನ್ನು ಯಾವ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ’ ಎಂದು ಪೂರ್ಣಿಮಾ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು