‘ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮಾಡಲು ರಾಹುಲ್ ಗಾಂಧಿ ಬಳಿಯೇ ಮೊರೆ’

7
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಶಾಸಕ ಶಿವಮೂರ್ತಿ ನಾಯಕ್ ಹೇಳಿಕೆ

‘ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮಾಡಲು ರಾಹುಲ್ ಗಾಂಧಿ ಬಳಿಯೇ ಮೊರೆ’

Published:
Updated:

ಬೆಂಗಳೂರು: ನನ್ನನ್ನು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮಾಡಿ ಎಂದು ನಾಯಕರಲ್ಲಿ ಕೇಳಿಕೊಳ್ಳುತ್ತೇನೆ. ಇಲ್ಲದಿದ್ದರೆ ನಾನು ದೆಹಲಿ ನಾಯಕರ ಬಳಿ ಹೋಗುತ್ತೇನೆ. ರಾಹುಲ್ ಗಾಂಧಿ ಬಳಿಯೇ ನನ್ನ ಬೇಡಿಕೆ ಇಡಲಿದ್ದೇನೆ ಎಂದು ಶಾಸಕ ಶಿವಮೂರ್ತಿ ನಾಯಕ್ ಹೇಳಿದ್ದಾರೆ. 

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ನಾನು ಸ್ಪರ್ಧಿಸಲು ಬಯಸಿದ್ದೇನೆ. ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಜನ, ಕೃಷಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ತಮ್ಮ ಸಮಯದಾಯದಿಂದ ಬಂದಿರುವ ವ್ಯಕ್ತಿಗೆ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಟಿಕೆಟ್ ಕೊಡುವಂತೆ ಆಗ್ರಹಿಸಿದ್ದಾರೆ. ಈ ಸಮುದಾಯದ ಪರ ಲೋಕಸಭೆಯಲ್ಲಿ ದನಿ ಎತ್ತಬೇಕಾಗಿದೆ ಎಂದು ಗದಗ - ಹಾವೇರಿ ಜಿಲ್ಲಾ ಮುಖಂಡರ ಸಭೆ ಬಳಿಕ ಎಚ್.ಕೆ. ಪಾಟೀಲ ಹೇಳಿದ್ದಾರೆ. 

ಪಕ್ಷದ ಸಂಘಟನೆ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ನಾಯಕರು ಹೇಳಿದ್ದಾರೆ. ಸರ್ಕಾರದ ಕಾರ್ಯಕ್ರಮಗಳನ್ನ ಜನರಿಗೆ ತಲುಪಿಸುವ ಕುರಿತೂ ಚರ್ಚೆ ನಡೆದಿದೆ. ಆದರೆ, ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮವಾಗಿಲ್ಲ

ಜಿ.ಎಸ್ ಪಾಟೀಲ್ ನೇತೃತ್ವದಲ್ಲಿ ನಮ್ಮ ಭಾಗದ ಮುಖಂಡರು ಸಭೆ ಸೇರಲಿದ್ದೇವೆ. ಹದಿನೈದು ದಿನಗಳೊಳಗೆ ಒಮ್ಮತದ ಅಭ್ಯರ್ಥಿಯನ್ನ ಆಯ್ಕೆ ಮಾಡುತ್ತೇವೆ. ಬಳಿಕ ಪಕ್ಷದ ಮುಖಂಡರಿಗೆ ಅದನ್ನು ತಿಳಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !