ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ
ಜಿಲ್ಲಾ ಮಟ್ಟದ ಉದ್ಯೋಗ ಮೇಳ–2026ಕ್ಕೆ ಉತ್ತಮ ಸ್ಪಂದನೆ ದೊರೆಯಿತು. ಉದ್ಯೋಗ ಮೇಳದಲ್ಲಿ ಒಟ್ಟು 6248 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 25ಕ್ಕೂ ಹೆಚ್ಚಿನ ಕೊಠಡಿಗಳಲ್ಲಿ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೊಠಡಿಯ ಮುಂಭಾಗದಲ್ಲಿ ಕಂಪನಿಗಳ ಹೆಸರು ಅಗತ್ಯ ಇರುವ ವಿದ್ಯಾರ್ಹತೆಯನ್ನು ಫಲಕಗಳಲ್ಲಿ ಹಾಕಲಾಗಿತ್ತು. ಕಾಲೇಜಿನ ನೆಲಮಹಡಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು.