ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಸೋಮಶೇಖರ ₹ 116 ಕೋಟಿ ಒಡೆಯ

Last Updated 23 ನವೆಂಬರ್ 2021, 13:39 IST
ಅಕ್ಷರ ಗಾತ್ರ

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿ.ಸೋಮಶೇಖರ ₹ 116 ಕೋಟಿ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಇವರ ಪತ್ನಿಯೂ ₹ 23 ಕೋಟಿ ಆಸ್ತಿಯ ಒಡತಿ.

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸೋಮಶೇಖರ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರು. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದಾರೆ. ಇವರು ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ್ದಾರೆ. ಪತ್ನಿ ಮಂಜುಳಾ ಹಾಗೂ ಮೂವರು ಮಕ್ಕಳು ಇದ್ದಾರೆ.

₹ 35 ಕೋಟಿ ಚರಾಸ್ತಿ ಹಾಗೂ ₹ 80 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಐದು ಬ್ಯಾಂಕುಗಳಲ್ಲಿ ₹ 6.32 ಕೋಟಿ ಠೇವಣಿ ಇಟ್ಟಿದ್ದಾರೆ. ₹ 28.52 ಕೋಟಿ ಹಣವನ್ನು ಉದ್ಯಮದಲ್ಲಿ ತೊಡಗಿಸಿದ್ದಾರೆ. ಇದರಲ್ಲಿ ಬಹುತೇಕ ಹಣವನ್ನು ಜಮೀನು ಮುಂಗಡ ನೀಡಿದ್ದಾರೆ. ₹ 30 ಲಕ್ಷ ಮೌಲ್ಯದ ರೇಂಜ್‌ ರೋವರ್‌ ಕಾರು, ಪತ್ನಿಗೆ ಇನ್ನೊವಾ ಕಾರು ಇದೆ.

ಮಂಜುಳಾ ಅವರ ಬಳಿ ₹ 1.4 ಲಕ್ಷ ಮೌಲ್ಯದ ಮೊಬೈಲ್‌ ಫೋನ್‌, ₹ 8 ಲಕ್ಷ ಮೌಲ್ಯದ ಚಿನ್ನಾಭರಣ ಇವೆ. ₹ 22.4 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಇವರು ₹ 91 ಲಕ್ಷ ಹಾಗೂ ಸೋಮಶೇಖರ ₹ 71 ಲಕ್ಷ ಸಾಲ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT