ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರಚಾರಮಂತ್ರಿ: ಅಖಿಲೇಶ್ ವ್ಯಂಗ್ಯ

Published 6 ಮೇ 2023, 20:29 IST
Last Updated 6 ಮೇ 2023, 20:29 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರಮಂತ್ರಿ’ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ವ್ಯಂಗ್ಯವಾಡಿದರು.

‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್‌ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.

ಬಜರಂಗ ದಳ ನಿಷೇಧ ಪ್ರಸ್ತಾವಕ್ಕೆ ಬೆಂಬಲ (ಲಖನೌ ವರದಿ): ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಬೆಂಬಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ದ್ವೇಷ ಹರಡುವ ಮತ್ತು ಕೋಮು ಸೌಹಾರ್ದವನ್ನು ಕದಡುವ ಸಂಘಟನೆಗಳು ನಿಷೇಧವಾಗಬೇಕು. ಅಂಥ ಸಂಘಟನೆಗಳಿಗೆ ದೇಶದಲ್ಲಿ ಜಾಗ ಇಲ್ಲ’ ಎಂದು ಬಜರಂಗ ದಳದ ಹೆಸರನ್ನು ಉಲ್ಲೇಖಿಸದೆ ಹೇಳಿದರು.

ವಲ್ಲಭ ಭಾಯಿ ಪಟೇಲ್ ಅವರು ಗೃಹ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನಿಷೇಧಿಸಿದ್ದರು ಎಂಬುದನ್ನು ನೆನಪಿಸಿಕೊಂಡರು.

ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ. ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು.
ಅಖಿಲೇಶ್‌ ಯಾದವ್‌ ಸಮಾಜವಾದಿ ಪಕ್ಷದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT