ಮೊಳಕಾಲ್ಮುರು: ‘ಲಭ್ಯ ಅನುದಾನದಲ್ಲಿ ಆದ್ಯತೆ ಮೇರೆಗೆ ಯಾರಿಗೂ ಅನ್ಯಾಯವಾ ಗದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕಿನ ಜೆ.ಬಿ.ಹಳ್ಳಿಯಲ್ಲಿ ಶನಿ ವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ಮುಖ್ಯಮಂತ್ರಿ ಮೂಲಸೌಕರ್ಯಗಳ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಜೆ.ಬಿ.ಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ಬಾಕ್ಸ್ ಚರಂಡಿ ಮತ್ತು ರಸ್ತೆ ನಿರ್ಮಾಣ, ಜೆ.ಬಿ.ಹಳ್ಳಿಯಿಂದ ಆಂಧ್ರ ಗಡಿಭಾಗವನ್ನು ಸಂಪರ್ಕಿಸುವ 5 ಕಿ.ಮೀ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹ 2.50 ಕೋಟಿ, ಕಸಬಾ ಹೋಬಳಿಯ ಓದೋಬಯ್ಯನಹಟ್ಟಿ ಸಂಪರ್ಕ ರಸ್ತೆಯನ್ನು ₹ 1.50 ಕೋಟಿ ವೆಚ್ಚದಲ್ಲಿ, ತುಮಕೂರ್ಲಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ₹ 1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಗೌರವಾಧ್ಯಕ್ಷ ಎಸ್. ಖಾದರ್, ಮುಖಂಡರಾದ ದಡಗೂರು ಮಂಜುನಾಥ್, ಮಹೇಶ್, ಅಶೋಕ ಜೆ.ಬಿ.ಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-44-883832075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.