ಮೊಳಕಾಲ್ಮುರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎನ್.ವೈ.ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಅನುದಾನದಡಿ ರಾಷ್ಟ್ರೀಯ ಹೆದ್ದಾರಿ 150-ಎ ನಲ್ಲಿರುವ ಅಮಕುಂದಿ ಕ್ರಾಸ್ನಿಂದ ಚಿಕ್ಕೇರಹಳ್ಳಿ ಗ್ರಾಮವನ್ನು ಸಂಪರ್ಕಿಸುವ ರಸ್ತೆಯನ್ನು ₹ 70 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ.

ಇದೇ ವೇಳೆ ಕಾಡು ಸಿದ್ದಾಪುರ ಮತ್ತು ಚಿಕ್ಕೇರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ತಲಾ ₹ 14.50 ಲಕ್ಷ ವೆಚ್ಚದಲ್ಲಿ ಒಂದೊಂದು ಶಾಲಾ ಕೊಠಡಿ ನಿರ್ಮಿಸಲು ಭೂಮಿ ಪೂಜೆ ಮಾಡಲಾಯಿತು.

ತಾ.ಪಂ. ಇಒ ಎಂ. ಹನುಮಂತಪ್ಪ, ಪಂಚಾಯತ್ ರಾಜ್ ಎಇಇ ಲಿಂಗರಾಜ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ, ಮುಖಂಡರಾದ ಎಸ್. ಖಾದರ್, ಉಜ್ಜಿನಪ್ಪ, ಶೇಷಣ್ಣ, ಧನಂಜಯ್, ಮರಿಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-1278731490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.