ಮೊಳಕಾಲ್ಮುರು: ತಾಲ್ಲೂಕಿನ ಗಡಿಭಾಗದಲ್ಲಿರುವ 150 ‘ಎ’ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬುಕ್ಲೂರಹಳ್ಳಿ ಗೇಟ್ ಬಳಿ ಗುರುವಾರ ರಾತ್ರಿ ಸಂಭವಿಸಿದ ಕಾರು- ಲಾರಿ ನಡುವಣ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಟೈರ್ ಸಿಡಿದ ಕಾರಣ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಮೈಸೂರು ಮೂಲದ ಗಿರಿಜಾ (65) ಮತ್ತು ಚೇತನಾ (30) ಎಂದು ಗುರುತಿಸಲಾಗಿದೆ.

ಇವರು ಬಳ್ಳಾರಿಯಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಳ್ಳಕೆರೆ ಸಾರ್ವಜನಿಕ ಆಸ್ಪತೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಭವಿಸಿದಾಗ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಎಚ್.ಕಾಂತರಾಜ್, ಉದ್ಯಮಿ ಟಿವಿಎಸ್ ಅರುಣ್ ಕುಮಾರ್, ಪತ್ರಕರ್ತ ರಾಜಶೇಖರ್ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಸ್ಥಳಕ್ಕೆ ಪಿಎಸ್ಐ ಶಿವಕುಮಾರ ಭೇಟಿ ನೀಡಿದ್ದರು. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-1112657087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.