ಮೊಳಕಾಲ್ಮುರು: ‘ತಾಲ್ಲೂಕಿನ ಚಿಕ್ಕೋಬನಹಳ್ಳಿಯಲ್ಲಿ ಕೆಲ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ’ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ತಾಲ್ಲೂಕು ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

‘ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಗ್ರಾಮದಲ್ಲಿ 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪರಿಶಿಷ್ಟ ಜಾತಿ, ಪಂಗಡದ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ನೀರಿನ ಕೊರತೆಯಿಂದಾಗಿ ಕೂಲಿ ಕೆಲಸಕ್ಕೆ ಹೋಗುವುದನ್ನು ಬಿಟ್ಟು ನೀರು ತರುವುದು ಹಾಗೂ ನೀರಿಗಾಗಿ ಕಾಯುವುದೇ ಕೆಲಸವಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.

‘ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಮಸ್ಯೆ ಇನ್ನಷ್ಟು ಹೆಚ್ಚುತ್ತಿರುವ ಕಾರಣ ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದರು.

ಉಪ ತಹಶೀಲ್ದಾರ್ ಟಿ. ಮಹಾಂತೇಶ್ ಮನವಿ ಸ್ವೀಕರಿಸಿದರು. ಮಹಾನಂದಿ, ಮಂಜುನಾಥ್, ನಿರ್ಮಲಾ, ಖಲಂದರ್, ಭಟ್ರಹಳ್ಳಿ ಧನಂಜಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-44-2023082627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.