ಮೊಳಕಾಲ್ಮುರು: ತಾಲ್ಲೂಕಿನ ವಿವಿಧ ಕಡೆ ಗುರುವಾರ ಸಂಜೆ ಉತ್ತಮ ಮಳೆಯಾಗಿದೆ.

ಸಂಜೆ 4.30ಕ್ಕೆ ತೀವ್ರ ಗಾಳಿ, ಗುಡುಗು–ಸಿಡಿಲು ಸಹಿತ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಗಾಳಿ ರಭಸಕ್ಕೆ ಬೀದಿಬದಿಯ ಗೂಡಂಗಡಿಯವರು ಸಮಸ್ಯೆಯನ್ನು ಎದುರಿಸಿದರು. ಮೊಳಕಾಲ್ಮುರು, ಹಾನಗಲ್, ಮರ್ಲಹಳ್ಳಿ, ಮೊಗಲಹಳ್ಳಿ, ಕೊಂಡ್ಲಹಳ್ಳಿ, ಬಿ.ಜಿ.ಕೆರೆ, ನೇರ್ಲಹಳ್ಳಿ ಸುತ್ತಮುತ್ತ ಗ್ರಾಮಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

‘ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಹೊಲ ಸಿದ್ಧಪಡಿಸಿಕೊಳ್ಳಲು ಮಳೆ ತುಸು ಅನುಕೂಲ ಮಾಡಿಕೊಟ್ಟಿದೆ. ಮಳೆಯಿಂದಾಗಿ ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯಾಗಲಿದೆ’ ಎಂದು ರೈತರು ತಿಳಿಸಿದ್ದಾರೆ. ಮಳೆಯಿಂದಾಗಿ ಯಾವುದೇ ಹಾನಿ ಉಂಟಾಗಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-44-1644241791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.