ಮೊಳಕಾಲ್ಮುರು: ರಾಜ್ಯ ಸರ್ಕಾರ ಹಿಂದಿನ ಬಜೆಟ್ನಲ್ಲಿ ಪಟ್ಟಣಕ್ಕೆ ಮಂಜೂರು ಮಾಡಿರುವ 200 ಹಾಸಿಗೆ ಸಾಮರ್ಥ್ಯದ ಪ್ರತ್ಯೇಕ ಜಿಲ್ಲಾ ಆಸ್ಪತ್ರೆಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಚರ್ಚೆ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿವೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯನ್ನು ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವ್ಯಾಪ್ತಿಗೆ ನೀಡುವ ಪ್ರಕ್ರಿಯೆ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, ಅದಕ್ಕೆ ಮೊಳಕಾಲ್ಮುರು ತಾಲ್ಲೂಕನ್ನು ಆಯ್ಕೆ ಮಾಡಿ ಕರ್ನಾಟಕ ಗಣಿ ಪುನಶ್ಚೇತನ ನಿಗಮದ (ಕೆಎಂಇಆರ್ಸಿ) ಅನುದಾನದಲ್ಲಿ ₹ 91 ಕೋಟಿ ಮೊತ್ತ ನಿಗದಿ ಮಾಡಲಾಗಿದೆ. ಹೀಗಿರುವಾಗ ಜಿಲ್ಲಾ ಆಸ್ಪತ್ರೆ ಬೇರೊಂದು ಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಎಂಬ ವಿಚಾರ ಮುನ್ನೆಲೆಗೆ ಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ.

ಆಸ್ಪತ್ರೆ ನಿರ್ಮಾಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಮೊಳಕಾಲ್ಮುರಿಗೆ ಭೇಟಿ ನೀಡಿ ಸ್ಥಳವನ್ನೂ ಪರಿಶೀಲಿಸಿದ್ದಾರೆ. ಈಗಿರುವ ತಾಲ್ಲೂಕು ಆಸ್ಪತ್ರೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಸಿಬ್ಬಂದಿ ವಸತಿಗೃಹಗಳ ಸ್ಥಳದಲ್ಲಿಯೇ ಹೊಸ ಆಸ್ಪತ್ರೆ ನಿರ್ಮಿಸಬೇಕು ಎಂಬ ಪ್ರಸ್ತಾವನೆ ಇದೆ. ಶಾಸಕ ಎನ್.ವೈ. ಗೋಪಾಲಕೃಷ್ಣ, ಹಳೇ ಸ್ಥಳದಲ್ಲಿ ಆಸ್ಪತ್ರೆ ನಿರ್ಮಿಸಿದ್ದಲ್ಲಿ ಕಿಷ್ಕಿಂಧೆಯಾಗುವ ಜತೆಗೆ ಭವಿಷ್ಯದಲ್ಲಿ ಆಸ್ಪತ್ರೆ ಉನ್ನತಿಗೆ ಸ್ಥಳದ ಅಭಾವ, ಸ್ವಚ್ಛತೆ ಕೊರತೆಯಂತಹ ಸಮಸ್ಯೆ ಎದುರಾಗುತ್ತದೆ. ಹಾನಗಲ್ ಮುಖ್ಯರಸ್ತೆಯಲ್ಲಿ ಗುರುತಿಸಿರುವ 5 ಎಕರೆ ವಿಶಾಲ ಜಾಗದಲ್ಲಿ ನಿರ್ಮಿಸಿದಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ, ಸಂಡೂರು ತಾಲ್ಲೂಕಿನವರಿಗೂ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ್ದರು.

ಸಚಿವ ದಿನೇಶ್ ಗುಂಡೂರಾವ್ ಎರಡೂ ಸ್ಥಳ ವೀಕ್ಷಿಸಿದ ನಂತರ ಬೆಂಗಳೂರಿನಲ್ಲಿ ಅಧಿಕಾರಿಗಳು, ಶಾಸಕರ ಸಭೆ ಕರೆದು ಸ್ಥಳ ಅಂತಿಮಗೊಳಿಸುವುದಾಗಿ ತಿಳಿಸಿದ್ದರು. ಆದರೆ ಈಚೆಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮೊಳಕಾಲ್ಮುರಿನಲ್ಲಿ ಇಷ್ಟೊಂದು ದೊಡ್ಡ ಆಸ್ಪತ್ರೆ ಅಗತ್ಯವಿಲ್ಲ ಎಂಬ ವರದಿ ನೀಡಿದ್ದಾರೆ ಎಂಬ ಮಾಹಿತಿ ಇದ್ದು, ಅವರು ಆಸ್ಪತ್ರೆ ಸ್ಥಳಾಂತರದ ಮಾತುಗಳನ್ನಾಡಿದ್ದಾರೆ ಎಂಬ ವಿಚಾರ ಗೊಂದಲ ಸೃಷ್ಟಿಸಿದೆ.

‘ಈಗಿರುವ ಆಸ್ಪತ್ರೆಯು 100 ಹಾಸಿಗೆ ಸಾಮರ್ಥ್ಯ ಹೊಂದಿದ್ದು ಸಿಬ್ಬಂದಿ, ತಜ್ಞ ವೈದ್ಯರ ಸಮಸ್ಯೆ ಎದುರಿಸುತ್ತಿದೆ. ಆಸ್ಪತ್ರೆ ಉನ್ನತೀಕರಣದಿಂದಾಗಿ ಈ ಭಾಗದಲ್ಲಿ ಆರೋಗ್ಯ ಸೌಲಭ್ಯ ಹೆಚ್ಚುವ ನಿರೀಕ್ಷೆ ಹೊಂದಿದ್ದೆವು. ಪ್ರತ್ಯೇಕ ಜಿಲ್ಲಾ ಆಸ್ಪತ್ರೆಯನ್ನು ನಮ್ಮಿಂದ ಯಾವುದೇ ಕಾರಣಕ್ಕೂ ಕಿತ್ತುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ತೀವ್ರ ಹೋರಾಟ ಮಾಡಲಾಗುವುದು’ ಎಂದು ರೈತ ಸಂಘದ ಹಿರಿಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಹೇಳಿದರು.

ಆಸ್ಪತ್ರೆ ಮಂಜೂರಾದ ನಂತರ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಸಂದೇಶ ಪ್ರಕಟಿಸಿದ್ದಾರೆ. ಕೆಎಂಇಆರ್ಸಿ ಅನುದಾನ ಈವರೆಗೆ ಮೊಳಕಾಲ್ಮುರು ಮತ್ತು ಹೊಳಲ್ಕೆರೆ ತಾಲ್ಲೂಕುಗಳಿಗೆ ಸೀಮಿತವಾಗಿತ್ತು. ಈ ಬಾರಿ ಬಜೆಟ್ನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಿ ಆದೇಶಿಸಿರುವುದು ಆಸ್ಪತ್ರೆ ಸ್ಥಳಾಂತರ ಮಾತಿಗೆ ಪುಷ್ಟಿ ನೀಡಿದೆ ಎಂಬ ಚರ್ಚೆಗಳೂ ನಡೆದಿವೆ.

ಸೌಲಭ್ಯ ಕಿತ್ತುಕೊಳ್ಳದಿರಿ...

ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಬೇರೆ ತಾಲ್ಲೂಕಿಗೆ ಸ್ಥಳಾಂತರವಾಗಲಿದೆ ಎಂಬ ಚರ್ಚೆ ಹಿನ್ನೆಲೆಯಲ್ಲಿ ಈಚೆಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿದ್ದರು. ‘ನಮ್ಮ ಸೌಲಭ್ಯ ಕಿತ್ತುಕೊಂಡು ಬೇರೆಯವರಿಗೆ ಅನುಕೂಲ ಮಾಡುವುದಕ್ಕೆ ನಮ್ಮ ವಿರೋಧವಿದೆ’ ಎಂದು ಪ್ರತಿಭಟನೆ ದಾಖಲಿಸಿದ್ದಾರೆ.

‘ಮೊಳಕಾಲ್ಮುರಿಗೆ ಅನ್ಯಾಯವಾಗದ ರೀತಿ ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ಶಾಸಕರಿಗೆ ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

‘ಆಡಳಿತಾತ್ಮಕ ವರದಿಯೊಂದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ವಿಷಯವನ್ನು ಮುಖ್ಯಮಂತ್ರಿ, ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ. ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೇ ಕೈಜೋಡಿಸಿದಲ್ಲಿ ಮಾತ್ರ ಸೌಲಭ್ಯಗಳು ದೊರೆಯುತ್ತವೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.

ಶೀಘ್ರವೇ ಬೆಂಗಳೂರಿನಿಂದ ಅಧಿಕಾರಿಗಳ ತಂಡ ಮೊಳಕಾಲ್ಮುರಿಗೆ ಬರಲಿದೆ. ಹೊಸ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು ಎಂಬ ಕುರಿತು ಪರಿಶೀಲಿಸಿ ವರದಿ ನೀಡಲಿದೆ, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು
ಡಾ.ಜಿ.ಪಿ.ರೇಣುಕಾ ಪ್ರಸಾದ್, ಜಿಲ್ಲಾ ಆರೋಗ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.