ಮೊಳಕಾಲ್ಮುರು: ರೈತರ ಜೊತೆ ದರ್ಪದಿಂದ ವರ್ತಿಸುತ್ತಿರುವ ಬೆಸ್ಕಾಂನ ಹಿರಿಯೂರು ವಿಭಾಗದ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಬೆಸ್ಕಾಂ ಕಚೇರಿ ಎದುರು ರೈತಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.

ಇಇ ಕಚೇರಿಯ ಉಸ್ತುವಾರಿ ಹಾಗೂ ವಿದ್ಯುತ್ ಪರಿಕರ, ಟಿಸಿ ವಿತರಣೆ ಹೊಣೆ ನಿರ್ವಹಿಸುತ್ತಿರುವ ಅಧಿಕಾರಿಯು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ರೈತ ಸಂಘ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ಕೂಡಲೇ ಅವರನ್ನು ಪರಿಕರ ವಿತರಣೆ ಹೊಣೆಯಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ತಾಲ್ಲೂಕಿನ ನಾಗಸಮುದ್ರ, ಹಾನಗಲ್, ರಾಂಪುರ ಸೇರಿದಂತೆ ಹಲವು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ಕೃಷಿ ಪಂಪ್ಸೆಟ್ಗಳಿಗೆ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಬಿ.ಜಿ.ಕೆರೆ, ತಳಕು ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿಯೂ ನೀಡಬೇಕು ಎಂದು ಮನವಿ ಮಾಡಿದರು.

ಬೆಸ್ಕಾಂ ಸಹಾಯಕ ಇಇ ರವಿ ಅವರು ಮನವಿ ಸ್ವೀಕರಿಸಿದರು. ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ, ಈರಣ್ಣ, ತಿಪ್ಪೇಸ್ವಾಮಿ ರೆಡ್ಡಿ, ತಿಪ್ಪೇಸ್ವಾಮಿ, ಶಿವಪ್ರಕಾಶ್, ಕೆ.ಟಿ. ನಾಗೇಶ್, ಮಹೇಶ್, ರಾಮಾಂಜಿನೇಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-44-1756422056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.