ಮೊಳಕಾಲ್ಮುರು: ‘ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನಲ್ಲಿ ಜಮೀನು ವಶಕ್ಕೆ ಪಡೆಯುವ ಕಾರ್ಯ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

‘ತಾಲ್ಲೂಕಿನ ಮೂಲಕ ಅನಂತಪುರ- 11 ಆರ್ಇಜಿ-1 ನೇ ಹಂತದ ಕಾಮಗಾರಿಗೆ ಸಂಬಂಧಪಟ್ಟಂತೆ ಪ್ರಸರಣ ಮಾರ್ಗಗಳ ಗೋಪುರ ಹಾಗೂ ಮೊಗಸಾಲೆಗಳ ನಿರ್ಮಾಣ ಮಾಡುತ್ತಾರೆಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಈಚೆಗೆ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನೂ ನಡೆಸಲಾಗಿದೆ. ತಾಲ್ಲೂಕಿನ ತುಪ್ಪದಕ್ಕನಹಳ್ಳಿ ಮಾರ್ಗದಲ್ಲಿ ಈ ವಿದ್ಯುತ್ ಮಾರ್ಗ ಸಾಗಲಿದ್ದು, ಜಮೀನು ವಶಕ್ಕೆ ಪಡೆಯುವ ಆತಂಕ ಎದುರಾಗಿದೆ’ ಎಂದು ದೂರಿದರು.

‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರು ಹೆಚ್ಚಾಗಿದ್ದು, ತುಂಡು ಭೂಮಿಗಳನ್ನು ಹೊಂದಿದ್ದಾರೆ. ಈ ಭೂಮಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಜತೆಗೆ ಜಾನುವಾರುಗಳನ್ನು ಸಲಹುತ್ತಿದ್ದಾರೆ. ಈಗ ವಿದ್ಯುತ್ ಮಾರ್ಗಕ್ಕಾಗಿ ಇಂತಹ ಜಮೀನು ವಶಕ್ಕೆ ಪಡೆದರೆ ರೈತರು ಬೀದಿಗೆ ಬೀಳಲಿದ್ದಾರೆ. ಗೋಪುರಗಳ ಕೆಳಗಡೆ ಯಾವ ಬೆಳೆಯನ್ನೂ ಬೆಳೆಯಲು ಬರುವುದಿಲ್ಲ’ ಎಂದು ಹೇಳಿದರು.

‘ಇದಕ್ಕೆ ಅಧಿಕಾರಿಗಳು ಅವಕಾಶ ನೀಡಬಾರದು, ನೀಡಿದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ರೈತಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ರಾಜಣ್ಣ, ಎಸ್.ವಿ. ರಾಜಣ್ಣ, ರಾಮಾಂಜಿನೇಯ, ಜಿ.ಟಿ.ಶ್ರೀನಿವಾಸ್, ಜಿ.ಬಿ. ರುದ್ರಮುನಿ, ಪಿ.ಟಿ. ನಿಂಗಣ್ಣ, ಟಿ. ಶಿವಮೂರ್ತಿ, ಜಿ.ಎಲ್. ದಾಸಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-1789625086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.