ಮೊಳಕಾಲ್ಮುರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮಗಳಲ್ಲಿರುವ ನೀರಿನ ಶುದ್ಧೀಕರಣ ಘಟಕಗಳು ಕಾರ್ಯ ನಿರ್ವಹಿಸದ್ದರಿಂದ ಜನ ಅಶುದ್ಧ ನೀರನ್ನೇ ಕುಡಿಯಬೇಕಿದೆ. ಇನ್ನೂ ಕೆಲವು ಕಡೆ ಘಟಕಗಳನ್ನು ದುರಸ್ತಿ ಮಾಡಿಸದಿದ್ದರೂ ನಕಲಿ ದಾಖಲೆ ನೀಡಿ ಅಪಾರ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಂಚಾಯಿತಿಗಳಲ್ಲಿ ಚರಂಡಿ, ಬೀದಿದೀಪ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

‘ಗ್ರಾಮೀಣ ಭಾಗದಲ್ಲಿ ಹಗಲಿನ ವೇಳೆಯೂ ಬೀದಿದೀಪಗಳು ಉರಿಯುತ್ತಿದ್ದು, ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಪೋಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಅಗತ್ಯ ಸಿಬ್ಬಂದಿ ನೇಮಿಸಬೇಕು. ಬಿ.ಜಿ. ಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಪತ್ರೆ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಎಸ್. ರಾಜಣ್ಣ, ಟಿ.ಚಂದ್ರಣ್ಣ, ನವೀನ್, ಆಚಾರಿ, ತಿಪ್ಪೇಸ್ವಾಮಿ, ಮೀಸೆ ತಿಪ್ಪೇಸ್ವಾಮಿ, ಎದ್ಲು ತಿಪ್ಪಸ್ವಾಮಿ, ಪಿ.ಟಿ. ಈರಣ್ಣ, ಪಿ.ಟಿ. ನಿಂಗಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-1773602442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.