ಮೊಳಕಾಲ್ಮುರು: ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಭಾನುವಾರ ಆಟ ಆಡುತ್ತಿದ್ದ ಬಾಲಕಿಯ ಮೇಲೆ ಕೋತಿಗಳು ಏಕಾಏಕಿ ದಾಳಿ ನಡೆಸಿದ್ದು, ಆಕೆ ತೀವ್ರವಾಗಿ ಗಾಯಗೊಂಡಿದ್ದಾಳೆ.

ಗ್ರಾಮದ ಸಮುದಾಯ ಆರೋಗ್ಯಾಧಿಕಾರಿ ಎಂ.ಮಂಜುನಾಥ್ ಅವರ ಪುತ್ರಿ ಎಂ. ಲಹನ್ವಿ ಗಾಯಗೊಂಡಾಕೆ. ಲಕ್ಷ್ಮಿ ಬಜಾರ್ ಕಾಲೊನಿಯಲ್ಲಿ ಆಟವಾಡುತ್ತಿದ್ದಾಗ ಕೋತಿಗಳು ದಾಳಿ ಮಾಡಿವೆ. ತಲೆಗೆ ತೀವ್ರವಾಗಿ ಕಚ್ಚಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇತ್ತೀಚಿನ ದಿನಗಳಲ್ಲಿ ಗ್ರಾಮದಲ್ಲಿ ಕೋತಿ ಹಾಳಿ ಹೆಚ್ಚಾಗಿದ್ದು ಮಕ್ಕಳು, ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-44-701919961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.