ಮೊಳಕಾಲ್ಮುರು: ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ಮುಟ್ಟಿವೆಯೇ ಎಂಬ ಬಗ್ಗೆ ಮನವರಿಕೆ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿವಾರು ಸಭೆಯನ್ನು ಆಯೋಜಿಸಿ ಚರ್ಚೆ ನಡೆಸಲಾಗುತ್ತಿದೆ’ ಎಂದು ಶಿಶು ಅಭಿವೃದ್ಧಿ ಅಧಿಕಾರಿ ನವೀನ್ ಹೇಳಿದರು.

ತಾಲ್ಲೂಕಿನ ಕೋನಸಾಗರದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

‘ಯೋಜನೆಗಳು ಎಷ್ಟರ ಮಟ್ಟಿಗೆ ಅನುಷ್ಠಾನವಾಗಿವೆ, ಎಷ್ಟು ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ, ಯಾರಾದರೂ ಫಲಾನುಭವಿ ಕೈಬಿಟ್ಟು ಹೋಗಿದ್ದಲ್ಲಿ ಕಾರಣ ಹಾಗೂ ಸೇರ್ಪಡೆ ಅವಕಾಶದ ಬಗ್ಗೆ ಹಾಗೂ ಅನುಷ್ಠಾನದಲ್ಲಿ ಇರುವ ಲೋಪದೋಷದ ಬಗ್ಗೆ ಶಿಬಿರದಲ್ಲಿ ಮುಕ್ತವಾಗಿ ಚರ್ಚಿಸಬಹುದಾಗಿದೆ’ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವೈ.ಪಿ. ಚೇತನ್ ಶಿಬಿರವನ್ನು ಉದ್ಘಾಟಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ವೀರೇಶ್, ರತ್ನಮ್ಮ, ಸಿದ್ದಮ್ಮ, ಪಿ. ಪಾಲಯ್ಯ, ಪಿಡಿಒ ಯಶವಂತ್, ಕಾಂಗ್ರೆಸ್ ಮುಖಂಡ ಜಗದೀಶ್, ಗ್ಯಾರಂಟಿ ಸಮಿತಿ ಸದಸ್ಯರಾದ ಟಿ.ಎಸ್. ಪಾಲಯ್ಯ, ನರಸಿಂಹರೆಡ್ಡಿ, ರೇಷ್ಮೆ ವೀರೇಶ್, ಹೊನ್ನೂರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.