ಮೊಳಕಾಲ್ಮುರು: ವಾಸ ಸ್ಥಳಗಳ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಮಲೇರಿಯಾ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ. ಗಿರೀಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಂದು ಕಾಲದಲ್ಲಿ ದೇಶವನ್ನು ಮಾರಣಾಂತಿಕವಾಗಿ ಕಾಡುತ್ತಿದ್ದ ಮಲೇರಿಯಾವನ್ನು 2030ರ ವೇಳೆಗೆ ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಹಲವು ಕಾರ್ಯಕ್ರಮವನ್ನು ಸರ್ಕಾರ ಹಾಕಿಕೊಂಡಿದೆ. ಇವುಗಳ ಸಮರ್ಪಕ ಅನುಷ್ಠಾನಕ್ಕೆ ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಗುರಿ ಸಾಧನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ವೈದ್ಯರಾದ ರಾಘವೇಂದ್ರ ತೊಣಪೆ, ಅನಿತಾ, ಹಿರಿಯ ಆರೋಗ್ಯ ನಿರೀಕ್ಷಕ ಟಿ. ಕುಮಾರ್, ಹಿರಿಯ ಆರೋಗ್ಯ ಸಹಾಯಕಿ ಮಾರುತಮ್ಮ, ಫಾರ್ಮಸಿಸ್ಟ್ ಬಿ.ಸಿ. ಈಶ್ವರಮ್ಮ, ಸಿಬ್ಬಂದಿ ರಜನಿ, ರವಿಶಂಕರ್, ನಂದಕುಮಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-44-1442410113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.