ಮೊಳಕಾಲ್ಮುರು: ಹೆಲ್ಮೆಟ್ ಧರಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಬುಧವಾರ ಪಟ್ಟಣದಲ್ಲಿ ಪೊಲೀಸರು ಬೈಕ್ ಸವಾರರಿಗೆ ಜಾಗೃತಿ ಮೂಡಿಸಿದರು.

ಮುಖ್ಯರಸ್ತೆಯಲ್ಲಿ ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹೆಲ್ಮೆಟ್ ಧರಿಸದವರ ಬೈಕ್ಗಳನ್ನು ತಡೆದು ತಿಳಿವಳಿಕೆ ನೀಡಿದರು.

‘ದಂಡ ಕಟ್ಟುವುದು ಪರಿಹಾರವಲ್ಲ, ಕಡ್ಡಾಯವಾಗಿ ಹೆಲ್ಮೆಟ್ ಧರಿಸಿದಲ್ಲಿ ಅಮೂಲ್ಯ ಜೀವ ಕಾಪಾಡಿಕೊಳ್ಳುವ ಜತೆಗೆ ನಂಬಿಕೊಂಡಿರುವ ಕುಟುಂಬಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಸಾಧ್ಯವಿದೆ. ಯುವಕರು ಹೆಚ್ಚಾಗಿ ಹೆಲ್ಮೆಟ್ ಧರಿಸದಿರುವುದು ಕಂಡುಬರುತ್ತಿದ್ದು ಮನೆಯಲ್ಲಿ ಪಾಲಕರು ತಿಳಿವಳಿಕೆ ಮೂಡಿಸಬೇಕು’ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ಮನವಿ ಮಾಡಿದರು.

‘60ಕ್ಕೂ ಹೆಚ್ಚು ಬೈಕ್ ಸವಾರರು ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದದ್ದು ಕಾಣಸಿಕ್ಕಿದ್ದು, ಅವರಿಗೆ ದಂಡದ ಬದಲಿಗೆ ಅದೇ ಹಣದಲ್ಲಿ ಹೆಲ್ಮೆಟ್ ಖರೀದಿಸಿ ತಂದು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಧರಿಸುವಂತೆ ತಿಳಿ ಹೇಳಿ ಕಳಿಸಲಾಯಿತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.