ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಅಳವಡಿಸಿರುವ ಡಿವೈಡರ್ ವಿದ್ಯುತ್ ದೀಪಕ್ಕೆ ಈಚೆಗೆ ಚಾಲನೆ ನೀಡಲಾಯಿತು.

ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಹಾದು ಹೋಗಿರುವ ಬೆಂಗಳೂರು- ಬಳ್ಳಾರಿ ಮುಖ್ಯರಸ್ತೆಯ ಡಿವೈಡರ್ಗೆ ಈ ಹಿಂದೆ ವಿದ್ಯುತ್ ದೀಪ ಅಳವಡಿಸಲಾಗಿತ್ತು. ಈಗ ಓಬಳಾಪುರ ಮುಖ್ಯರಸ್ತೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ.

2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ₹95 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕಾಮಗಾರಿ ಉದ್ಘಾಟಿಸಿದ ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ರಾಂಪುರ ಗ್ರಾಮವು ತಾಲ್ಲೂಕಿನಲ್ಲಿ ಹಲವು ರಂಗಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು ಭವಿಷ್ಯದ ದೃಷ್ಟಿಯಿಂದ ಹಲವು ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ವಿಷಯಗಳಲ್ಲಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಸಿದ್ದಬಸಪ್ಪ, ಜಿ. ವಿಜಯಕುಮಾರ್, ಜಗದೀಶ್, ವಿಜಯಕುಮಾರ್, ಗುತ್ತಿಗೆದಾರ ಎಸ್. ಖಾದರ್, ಪಿಡಿಒ ಗುಂಡಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-44-1911663919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.