ಮೊಳಕಾಲ್ಮುರು: ‘ಜೀವನದಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಪ್ರಾಂಶುಪಾಲ ಲಿಂಗೇಶ್ವರ್ ಸಲಹೆ ನೀಡಿದರು.

ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ತಾಲ್ಲೂಕಿನ ಆಯ್ದ 60 ಸ್ವಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಿದ್ದ ಸಿಡ್ಬಿ ಯೋಜನೆ ಉದ್ಯಮ ಶೀಲತಾ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ದೊಡ್ಡ ಮಟ್ಟದ ಉದ್ಯಮಿಗಳಿಗೆ ಸೀಮಿತವಾಗಿದ್ದ ಸಿಡ್ಬಿ ಯೋಜನೆ ಸಾಲ ಸೌಲಭ್ಯವನ್ನು ವೀರೇಂದ್ರ ಹೆಗ್ಗಡೆ ಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಸಣ್ಣ ಉದ್ಯಮಿಗಳಿಗೆ ನೀಡಲು ಕ್ರಮ ಕೈಗೊಳ್ಳುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಯೋಜನೆಯನ್ನು ಸದುಪಯೋಗ ಮಾಡಿಕೊಂಡು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಒತ್ತಡ ರಹಿತವಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು ಎಂದು ಸಿಡ್ಬಿ ಯೋಜನೆ ಪ್ರಾದೇಶಿಕ ಅಧಿಕಾರಿ ಮೌನೇಶ್ ತಿಳಿಸಿದರು.

ಸಂಸ್ಥೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ರಾಘವೇಂದ್ರ, ಎಸ್ಎಚ್ಜಿ ಯೋಜನಾಧಿಕಾರಿ ಧರ್ಮೇಂದ್ರ, ಕೃಷಿ ವಿಭಾಗದ ತುಮಕೂರ್ಲಹಳ್ಳಿ ಬೋರಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-456874505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.