ಮೊಳಕಾಲ್ಮುರು: ಮಕ್ಕಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರದಷ್ಟೇ ಪಾಲಕರ ಪಾತ್ರವೂ ಇರುವ ಕಾರಣ ಶಾಲೆಯಿಂದ ಹೊರಗಡೆ ಇರುವ ಸಮಯದಲ್ಲಿ ಮಕ್ಕಳ ಬಗ್ಗೆ ಗಮನಹರಿಸಲು ಮುಂದಾಗಬೇಕು ಎಂದು ಡಿಡಿಪಿಐ ರವಿಶಂಕರ ರೆಡ್ಡಿ ಹೇಳಿದರು.

ತಾಲ್ಲೂಕಿನ ಮೊಗಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಪಾಲಕರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದಾಗ ಮಾತ್ರ ನಿರೀಕ್ಷಿತ ಫಲ ಸಾಧ್ಯವಿದೆ’ ಎಂದರು.

ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೆ. ನಾಗರಾಜ್ ಮಾತನಾಡಿ, ‘ಸರ್ಕಾರ ನಮ್ಮ ಶಾಲೆ- ನಮ್ಮ ಜವಾಬ್ದಾರಿ ಎಂಬ ಕಾರ್ಯಕ್ರಮ ಜಾರಿಗೆ ತಂದಿರುವುದು ಶ್ಲಾಘನೀಯ. ಹಳೆ ವಿದ್ಯಾರ್ಥಿಗಳು ಶಿಕ್ಷಣ ಪೂರ್ಣ ನಂತರವೂ ಶಾಲೆ ಜತೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಶಾಲೆ ಅಭ್ಯುದಯಕ್ಕೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಕೊಡಗನೂರು ಪಿಡಿಒ ಎಂ.ವಿ. ರೂಪಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಡಿಪಿಐ ಕಚೇರಿ ವಿಷಯ ಪರಿವೀಕ್ಷಕ ಎಚ್.ಟಿ. ಚಂದ್ರಣ್ಣ, ನಿವೃತ್ತ ಶಿಕ್ಷಕರಾದ ಎನ್. ಅಪ್ಪಳ್ಳಿ, ಕಾಂತರಾಜ್, ಎಚ್. ತಿಪ್ಪೇಸ್ವಾಮಿ, ಅಬ್ದುಲ್ ರಶೀದ್, ಬಿ. ನಾಗಮ್ಮ, ಶಿಕ್ಷಕ ಜಿ. ಮೂರ್ತಿ, ತಿಪ್ಪೇರುದ್ರಪ್ಪ, ಎಚ್.ಎನ್. ಸುಜಾತ, ವಿ. ಸಿದ್ದಾರ್ಥ್, ನೂರಾರು ಹಳೆ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.