ಮೊಳಕಾಲ್ಮುರು: 2023–24ನೇ ಸಾಲಿನ ಗಾಂಧಿ ಪುರಸ್ಕಾರ ಗ್ರಾಮ ಪ್ರಶಸ್ತಿಗೆ ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು, ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಲ್ಲೂಕಿನಲ್ಲಿ 16 ಒಟ್ಟು ಗ್ರಾಮ ಪಂಚಾಯಿತಿಗಳಿದ್ದು, ಪಂಚಾಯತ್ ರಾಜ್ ಇಲಾಖೆ ಕೊಟ್ಟಿದ್ದ ಪ್ರಶ್ನಾವಳಿಗೆ ಸಮಂಜಸವಾಗಿ ಉತ್ತರ ನೀಡಿ ಹೆಚ್ಚು ಅಂಕ ಗಳಿಸುವ ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿದೀಪಗಳ ನಿರ್ವಹಣೆ, ಸ್ವಚ್ಛತೆ, ಶುದ್ಧ ಕುಡಿಯವ ನೀರಿನ ವವಸ್ಥೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಿರುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಿಡಿಒ ಎನ್. ಗುಂಡಪ್ಪ ಮಾಹಿತಿ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಮತ್ತು ಇಲಾಖೆ ಆಯುಕ್ತೆ ಅರುಂಧತಿ ಚಂದ್ರಶೇಖರ್ ಪ್ರಶಸ್ತಿ ಪ್ರದಾನ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟಿ. ನಾಗವೇಣಿ ರವಿಶಂಕರ್, ಉಪಾಧ್ಯಕ್ಷೆ ಅನಂತಮ್ಮ ವಿಜಯಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.