ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರು: ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ

Published 6 ಡಿಸೆಂಬರ್ 2023, 14:04 IST
Last Updated 6 ಡಿಸೆಂಬರ್ 2023, 14:04 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ವಕೀಲರ ಸಂಘ ಬುಧವಾರ ಪ್ರತಿಭಟನೆ ನಡೆಸಿತು.

‘ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪ್ರೀತಮ್ ಅವರನ್ನು ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗಿದೆ. ಕಿರುಕುಳ ನೀಡಿರುವ ಪೊಲೀಸರು ವಕೀಲರ ವಿರುದ್ಧವೇ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಪ್ರೀಮ್ ಮೇಲೆ ದಾಖಲಿಸಿರುವ ಕೇಸ್ ವಾಪಸ್ ಪಡೆಯಬೇಕು ಮತ್ತು ಸೂಕ್ತ ಪರಿಹಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಆರ್. ಆನಂದ್ ಆಗ್ರಹಿಸಿದರು.

ತಹಶೀಲ್ದಾರ್ ಎಂ.ವಿ. ರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು.

ವಕೀಲರಾದ ಕುಮಾರಪ್ಪ, ಜಿ.ಎಚ್. ಸುರೇಶ್, ಚಾಣಕ್ಯ, ಕೆ.ಎಂ. ರಾಮಾಂಜಿನೇಯ, ವಿ.ಜಿ. ಪರಮೇಶ್ವರಪ್ಪ, ವಿ. ರಾಘವೇಂದ್ರ, ಮಲ್ಲಿಕಾರ್ಜುನ್, ಬಸವರಾಜ್, ವೀರೇಶ್ ಸಿದ್ದಪ್ಪ ಇತರರು ಭಾಗವಹಿಸಿದ್ದರು.

ಮೊಳಕಾಲ್ಮುರಿನಲ್ಲಿ ಬುಧವಾರ ವಕೀಲರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು
ಮೊಳಕಾಲ್ಮುರಿನಲ್ಲಿ ಬುಧವಾರ ವಕೀಲರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT