ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರು: ಪ್ರತಿಭಟನೆಗೆ ಸೀಮಿತವಾದ ಬಂದ್

ಹಲವು ಸಂಘಟನೆಗಳ ಬೆಂಬಲ, ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಭಾಗಿ
Last Updated 29 ಸೆಪ್ಟೆಂಬರ್ 2020, 7:28 IST
ಅಕ್ಷರ ಗಾತ್ರ

ಮೊಳಕಾಲ್ಮುರು: ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ನಲ್ಲಿ ತಾಲ್ಲೂಕಿನ ಹಲವು ಸಂಘಟನೆಗಳು ಭಾಗಿಯಾಗಿದ್ದವು.

ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ, ಮಾನವ ಸರಪಳಿ ನಿರ್ಮಾಣ, ಬಹಿರಂಗ ಸಭೆ, ಮನವಿ ಸಲ್ಲಿಕೆ ನಡೆದವು. ತಾಲ್ಲೂಕಿನ ಬೇರೆಡೆ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ, ಎಲ್ಲ ಸಂಘಟನೆಗಳು ತಾಲ್ಲೂಕು ಮಟ್ಟದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.

ನಂತರ ತಾಲ್ಲೂಕು ಕಚೇರಿ ಆವರಣಕ್ಕೆ ತೆರಳಿ ತಹಶೀಲ್ದಾರ್ ಮಲ್ಲಿ ಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿದರು. ಕಾಂಗ್ರೆಸ್, ಜೆಡಿಎಸ್, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿ, ಸಿಪಿಐ, ಎಐಟಿಯುಸಿ, ಸಿಐಟಿಯು, ಸಿಪಿಎಂ, ಕರವೇ (ಪ್ರವೀಣ್ ಶೆಟ್ಟಿ ಬಣ), ಟ್ಯಾಕ್ಸಿ ಚಾಲಕರ ಸಂಘಗಳು ಬೆಂಬಲ ಸೂಚಿಸಿದ್ದವು.

ಬೆಳಗಲ್ ಈಶ್ವರಯ್ಯ ಸ್ವಾಮಿ, ಮರ್ಲಹಳ್ಳಿ ರವಿಕುಮಾರ್, ಕನಕ ಶಿವಮೂರ್ತಿ, ತಿಪ್ಪೀರಯ್ಯಹಟ್ಟಿ ರಾಜಣ್ಣ, ಸೂರಮ್ಮನಹಳ್ಳಿ ರಾಜಣ್ಣ, ಡಿ.ಎಂ.ಮಲಿಯಪ್ಪ, ಎಚ್.ಮಾರಪ್ಪ, ಮಹಮದ್ ಇಕ್ಬಾಲ್, ಜಾಫರ್ ಷರೀಫ್, ಡಿ.ಪೆನ್ನಯ್ಯ, ಕೊಂಡಾಪುರ ಪರಮೇಶ್ವರಪ್ಪ, ರಾಯಾಪುರ ಮಹೇಶ್, ಮಂಜುನಾಥ್, ವಿ.ಮಾರನಾಯಕ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT