ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರು: ಎರಡು ಕಡೆ ಚೆಕ್‌ಪೋಸ್ಟ್ ಶುರು

Last Updated 23 ಏಪ್ರಿಲ್ 2021, 5:17 IST
ಅಕ್ಷರ ಗಾತ್ರ

ಮೊಳಕಾಲ್ಮುರು:ಕೊರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ಕಾರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಾಲ್ಲೂಕಿನಲ್ಲಿ ಎರಡು ಕಡೆ ತಪಾಸಣಾ ಕೇಂದ್ರಗಳನ್ನುಆರಂಭಿಸಲಾಗಿದೆ.

ಜಿಲ್ಲಾಡಳಿತ ಸೂಚನೆ ಮೇರೆಗೆ ಈ ಕೇಂದ್ರಗಳನ್ನು ತಾಲ್ಲೂಕು ಆಡಳಿತ ನೇತೃತ್ವದಲ್ಲಿ ಪ್ರಾರಂಭಿಸಲಾಗಿದೆ. ಇದರಲ್ಲಿ ಕಂದಾಯ, ಅಬಕಾರಿ, ಆರೋಗ್ಯ, ಪೊಲೀಸ್, ಅರಣ್ಯ, ಕೋವಿಡ್ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಕೇಂದ್ರಕ್ಕೆ ಒಟ್ಟು 20ಕ್ಕೂ ಹೆಚ್ಚು ಸಿಬ್ಬಂದಿಯನ್ನುನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ತಾಲ್ಲೂಕಿನಲ್ಲಿ ಹಾದು ಹೋಗಿರುವ 150 ‘ಎ’ ರಾಷ್ಟ್ರೀಯಹೆದ್ದಾರಿಯಲ್ಲಿನ ತಮ್ಮೇನಹಳ್ಳಿ ಬಳಿ ಒಂದು ಮತ್ತು ಪಟ್ಟಣದಿಂದ ಆಂಧ್ರ ಸಂಪರ್ಕಿಸುವ ಮುಖ್ಯರಸ್ತೆಯ ಎದ್ದಲ ಬೊಮ್ಮಯ್ಯನಹಟ್ಟಿ ಬಳಿ ಮತ್ತೊಂದು ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ’ ಎಂದು ಸಿಪಿಐ ಉಮೇಶ್ ಜಿ. ನಾಯಕ್ ‘ಪ್ರಜಾವಾಣಿ’ಗೆ ತಿಳಿಸಿದರು.

ಚೆಕ್‌ಪೋಸ್ಟ್‌ ಮೂಲಕ ಬರುವ ವಾಹನಗಳ ಮಾಹಿತಿ ಸಂಗ್ರಹಿಸಲಾಗುವುದು. ದೇಶದಲ್ಲಿ ಮತ್ತು ರಾಜ್ಯದಲ್ಲಿ ಸೋಂಕು ಹೆಚ್ಚಳವಿರುವ ಸ್ಥಳಗಳಿಂದ ಬರುವವಾಹನಗಳ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಲಾಗುವುದು. ರೋಗ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಲಾಗುವುದು. ತಾಲ್ಲೂಕು ಸೀಮಾಂಧ್ರ ಮತ್ತು ಕಲ್ಯಾಣ ಕರ್ನಾಟಕ ಗಡಿಯಲ್ಲಿರುವ ಕಾರಣ ವಾಹನ ತಪಾಸಣೆಗೆ ಹೆಚ್ಚು ಒತ್ತು ನೀಡಲಾಗಿದೆ. ವಾಹನ ಚಾಲಕರ ಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT