ಹೊಸದುರ್ಗ: ಬೆಂಬಲ ಬೆಲೆ ಯೋಜನೆಯಡಿ ಖರೀದಿ ಆಗಿರುವ ರಾಗಿ ಹಣವನ್ನು ವಾರದೊಳಗೆ ರೈತರ ಖಾತೆಗೆ ಜಮಾ ಮಾಡಲಾಗುವುದು. ಈ ಬಗ್ಗೆ ರೈತರು ಆತಂಕಪಡಬೇಕಿಲ್ಲ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದ್ದಾರೆ.
‘ಮಂಗಳವಾರ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ (ಎಂ.ಡಿ ) ಜ್ಞಾನೇಂದ್ರ ಕುಮಾರ್ ಅವರೊಂದಿಗೆ ತಾಲ್ಲೂಕಿನ ರೈತರ ಸಮ್ಮುಖದಲ್ಲಿ ಭೇಟಿಯಾಗಿ ಚರ್ಚಿಸಿದ ಪರಿಣಾಮ ₹ 53 ಕೋಟಿ ಹಣ ಬಿಡುಗಡೆಯಾಗಿದೆ. ಇನ್ನೊಂದ ವಾರದಲ್ಲಿ ರಾಗಿ ನೀಡಿರುವ ಒಟ್ಟು 5,316 ರೈತರ ಖಾತೆಗೆ ಹಣ ಜಮಾ ಆಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಗ್ರೈನ್ ವೋಚರ್ ಪಡೆಯದೆ ಇರುವವರು 450 ರೈತರಿದ್ದು, ಅದನ್ನು ಪರಿಶೀಲನೆ ನಡೆಸಲಾಗುವುದು. ರಾಗಿ ಖರೀದಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆಯೂ ಸೂಕ್ತ ಕ್ರಮ ಕೈಗೊಂಡು ಎಲ್ಲ ರೈತರಿಗೂ ಹಣ ಒದಗಿಸಲಾಗುವುದು. ಯಾವುದೇ ಗೊಂದಲಗಳಿಲ್ಲದೆ ರೈತರು ಹಣ ಪಡೆಯಬಹುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.