ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಸಮುದ್ರ: ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳ ವೀಕ್ಷಣೆ

Published 4 ಜನವರಿ 2024, 14:42 IST
Last Updated 4 ಜನವರಿ 2024, 14:42 IST
ಅಕ್ಷರ ಗಾತ್ರ

ಮೊಳಕಾಲ್ಮುರು: ವಿಧಾನಸಭಾ ಕ್ಷೇತ್ರದ ತಳಕು ಹೋಬಳಿಯ ಗೌರಸಮುದ್ರಕ್ಕೆ ಗುರುವಾರ ತಾಲ್ಲೂಕು ಪಂಚಾಯಿತಿ ಇಒ ಶಶಿಧರ್ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ವೀಕ್ಷಿಸಿದರು.

ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ್ದ ಅವರು ಉದ್ಯೋಗಖಾತ್ರಿ ಯೋಜನೆಯಲ್ಲಿ ಒಟ್ಟು 266 ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಸದಸ್ಯರು ಗ್ರಾಮಕ್ಕೆ ಬೇಕಾದ ಅಗತ್ಯ ಸೌಕರ್ಯಗಳನ್ನು ಯೋಜನೆ ಅಡಿಯಲ್ಲಿ ಕೈಗೊಳ್ಳಲು ವಿಪುಲ ಅವಕಾಶಗಳಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ನಂತರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಆವರಣದಲ್ಲಿ ಉದ್ಯೋಗಖಾತ್ರಿ ಯೋಜನೆಯಲ್ಲಿ ಕೈಗೊಂಡಿರುವ ಕೊಕ್ಕೊ, ವಾಲಿಬಾಲ್, ಕಬಡ್ಡಿ, ಇಕೋ ಪಾರ್ಕ್ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಶಾಲೆಯ ವಿದ್ಯಾರ್ಥಿಗಳಿಗೆ ಬಿಸಿಯೂಟ ಊಟ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಉದ್ಯೋಗಖಾತ್ರಿ ಯೋಜನೆಯಲ್ಲಿ ಭೋಜನಾಲಯ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣ, ಸದಸ್ಯರಾದ ಟಿ.ಶಶಿಕುಮಾರ್, ಜಿ.ಎಂ.ಈರಣ್ಣ, ಸಂಜಯ್ ಗೌಡ, ಪಿಡಿಒ ಹನುಮಂತರಾಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT