ಗುರುವಾರ , ಮೇ 13, 2021
16 °C

ಅನುಮಾನಾಸ್ಪದವಾಗಿ ಕೋತಿಗಳ ಸಾವು: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಅನುಮಾನಾಸ್ಪಾದವಾಗಿ ಕೋತಿಗಳು ಮೃತಪಡುತ್ತಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಮೂರು ದಿನಗಳಿಂದ 5-6 ಕೋತಿಗಳು ಕಾರಣವಿಲ್ಲದೇ ಮೃತಪಟ್ಟಿವೆ. ಇದು ಆತಂಕ ಉಂಟು ಮಾಡಿದೆ. ಮೃತ ಕೋತಿಗಳನ್ನು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ಏಕಾಏಕಿ ಕೋತಿಗಳು ಗ್ರಾಮದಲ್ಲಿ ಮೃತಪಡುತ್ತಿರುವುದು ಆತಂಕ ಸೃಷ್ಟಿಸಿದೆ. ಈ ಬಗ್ಗೆ ನಿಖರವಾದ ಕಾರಣ ತಿಳಿಯಲು ಪಶು ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಮಾಹಿತಿ ಪಡೆಯಲು ಪತ್ರಿಕೆ ಪಶು ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಂಪರ್ಕಕ್ಕೆ ಸಿಗಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು