ಬಜೆಟ್ನಲ್ಲಿ ಕಾಣಿಸುತ್ತಿದೆ ಕಪ್ಪುಚುಕ್ಕೆ: ಸಂಸದ ಎ.ನಾರಾಯಣಸ್ವಾಮಿ ಅಸಮಾಧಾನ

ಚಿತ್ರದುರ್ಗ: ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ನಿಗಮಗಳಿಗೆ ಹಂಚಿಕೆ ಮಾಡಿದ ಅನುದಾನದ ಬಗ್ಗೆ ಅಸಮಾಧಾನವಿದೆ. ಬಜೆಟ್ಗೆ ಇದೊಂದು ಕಪ್ಪುಚುಕ್ಕೆಯಾಗಿ ಕಾಣಿಸುತ್ತಿದೆ ಎಂದು ಬಿಜೆಪಿ ಸಂಸದ ಎ.ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಮೇಲ್ವರ್ಗದ ನಿಗಮಗಳಿಗೆ ನೀಡಿದ ಅನುದಾನದ ಬಗ್ಗೆ ಆಕ್ಷೇಪವಿಲ್ಲ. ಆದರೆ, ತುಳಿತಕ್ಕೆ ಒಳಗಾದ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಆದ್ಯತೆ ಸಿಗಬೇಕು. ಇದರಲ್ಲಿ ವ್ಯತ್ಯಾಸ ಕಾಣಿಸುತ್ತಿದೆ. ಈ ಸಮಸ್ಯೆಯನ್ನು ಸರಿಪಡಿಸಿಕೊಂಡರೆ ಪಕ್ಷಕ್ಕೆ ಅನುಕೂಲಗುತ್ತದೆ’ ಎಂದು ಹೇಳಿದರು.
‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಲಿತ ಮತ್ತು ಹಿಂದುಳಿದ ಸಮುದಾಯಕ್ಕೆ ಹೆಚ್ಚು ಒತ್ತು ನೀಡುವಂತೆ ಚರ್ಚಿಸಲಾಗುವುದು. ಸಾಮಾಜಿಕ ಕಳಕಳಿ ಹೊಂದಿದ ಯಡಿಯೂರಪ್ಪ ಅವರು ಸ್ಪಂದಿಸುವ ನಿರೀಕ್ಷೆ ಇದೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.