ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರನ್ನು ವಿಚಾರಣೆಗಾಗಿ ಪೊಲೀಸ್‌ ವಶಕ್ಕೆ ಪಡೆಯುತ್ತೇವೆ: ಎಸ್‌ಪಿ

Last Updated 2 ಸೆಪ್ಟೆಂಬರ್ 2022, 2:49 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೆರೆಸಿಕ್ಕಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಅವರನ್ನು ಮತ್ತೆ ಪೊಲೀಸ್‌ ವಶಕ್ಕೆ ಪಡೆಯುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ತಿಳಿಸಿದರು.

ಶುಕ್ರವಾರ ನಸುಕಿನಲ್ಲಿ ಮುರುಘಾಶ್ರೀ ಅವರನ್ನು ಕಾರಾಗೃಹಕ್ಕೆ ಹಸ್ತಾಂತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪೊಲೀಸ್‌ ವಶಕ್ಕೆ ಒಪ್ಪಿಸುವಂತೆ ಕೋರಿ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದೇವೆ’ ಎಂದು ಮಾಹಿತಿ ನೀಡಿದರು.

‘ಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಉಳಿದ ಮೂವರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಅವರ ಪತ್ತೆಗೂ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಪ್ರಕರಣದ ಪ್ರಮುಖ ಆರೋಪಿ ಬಂಧನಕ್ಕೆ ಪೂರಕವಾದ ಸಾಕ್ಷ್ಯಗಳನ್ನು ಕಲೆಹಾಕುವುದಕ್ಕೆ ಕಾಲಾವಕಾಶ ಹಿಡಿಯಿತು. ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗಬಹುದು ಎಂಬ ಕಾರಣಕ್ಕೆ ವಿಚಾರಣೆಗಾಗಿ ಶರಣರನ್ನು ಚಳ್ಳಕೆರೆಗೆ ಕರೆದೊಯ್ಯಲಾಗಿತ್ತು. ಬೇರೆ ಜೈಲಿಗೆ ಅವರನ್ನು ಸ್ಥಳಾಂತರಿಸುವ ಅಗತ್ಯ ಇನ್ನೂ ಸೃಷ್ಟಿಯಾಗಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಕಾರಾಗೃಹ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಹೇಳಿದರು.

‘ವೈದ್ಯಕೀಯ ತಪಾಸಣೆಯ ಬಳಿಕ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಬಹುದು ಎಂಬುದಾಗಿ ವೈದ್ಯರು ಅಭಿಪ್ರಾಯ ನೀಡಿದರು. ಶರಣರ ಆರೋಗ್ಯದ ಬಗ್ಗೆ ನ್ಯಾಯಾಧೀಶರು ಮಾಹಿತಿ ಪಡೆದಿದ್ದಾರೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಜೈಲು ಅಧಿಕಾರಿಗಳು ಸೂಚಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT