ಭಾನುವಾರ, ಸೆಪ್ಟೆಂಬರ್ 25, 2022
29 °C

ಮುರುಘಾ ಶರಣರಿಗೆ ಎದೆನೋವು: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಿಗ್ಗೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಜೈಲು‌ ಸಿಬ್ಬಂದಿ ತಕ್ಷಣ ಅವರನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರ ತಂಡ ಪರೀಕ್ಷೆ ನಡೆಸಿದೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಇಸಿಜಿ ಮಾಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಶುಕ್ರವಾರ ಬೆಳಿಗ್ಗೆ ಜೈಲಿಗೆ ಬಂದ ಮಠದ ಸಿಬ್ಬಂದಿ ಶರಣರಿಗೆ ಮಾತ್ರೆ ಹಾಗೂ ಟೂತ್ ಬ್ರೆಷ, ಪೇಸ್ಟ್, ಬಟ್ಟೆ ನೀಡಿದ್ದಾರೆ. ಇದಾದ ಕೆಲ ಹೊತ್ತನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಸುಕಿನ 3 ಗಂಟೆಯ ಹೊತ್ತಿಗೆ ಜೈಲು ಸೇರಿದ ಅವರು ನಿದ್ದೆ ಮಾಡಿರಲಿಲ್ಲ ಎನ್ನಲಾಗಿದೆ.

ಜೈಲುಪಾಲಾದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಜೈಲು ಸುತ್ತಲಿನ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು