ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಅನಾರೋಗ್ಯ: ನಿಗದಿಯಾಗದ ದೋಷಾರೋಪ

Last Updated 21 ಮಾರ್ಚ್ 2023, 14:20 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಅನಾರೋಗ್ಯ ಉಂಟಾಗಿದ್ದರಿಂದ ದೋಷಾರೋಪ ನಿಗದಿಯ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್‌ 30ಕ್ಕೆ ಮುಂದೂಡಿದೆ.

ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮೊದಲ ಪ್ರಕರಣದ ದೋಷಾರೋಪ ಮಂಗಳವಾರ ನಿಗದಿಯಾಗಬೇಕಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಯ ಅನಾರೋಗ್ಯದ ಕಾರಣಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ವಿಚಾರಣೆ ಮುಂದೂಡಿದರು.

ಸೆ.1ರಂದು ಬಂಧಿತರಾಗಿರುವ ಶಿವಮೂರ್ತಿ ಶರಣರನ್ನು ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿದೆ. ವಿಪರೀತ ಜ್ವರ, ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕಾರಾಗೃಹದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT